May 6, 2024

Chitradurga hoysala

Kannada news portal

ಬಿಜೆಪಿಗೆ ಮತ ಕೇಳುವ ನೈತಿಕ ಹಕ್ಕಿಲ್ಲ. ಮಾಜಿ ಸಚಿವ ಎಚ್.ಆಂಜನೇಯ.

1 min read



ಬಿಜೆಪಿಗೆ ಮತ ಕೇಳುವ ನೈತಿಕ ಹಕ್ಕಿಲ್ಲ. ಮಾಜಿ ಸಚಿವ ಎಚ್.ಆಂಜನೇಯ.

ಹೊಳಲ್ಕೆರೆ.ನ.30
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಕೇಳುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.
ಪಟ್ಟಣದ ಶಾದಿ ಮಹಲ್‍ನಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರವು ಕೇಂದ್ರ ಮತ್ತು ರಾಜ್ಯದ ಅಧಿಕಾರ ವಹಿಸಿಕೊಂಡ ನಂತರ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ, ಬಡರಿಗೆ ವಸತಿ ಕಲ್ಪಿಸಿಲ್ಲ. ವೃದ್ಧರಿಗೆ ಮಾಸಾಶನ ನೀಡುವುದು ಸೇರಿದಂತೆ ಅನೇಕ ಯೋಜನೆಗಳಿಗೆ ಹಣ ನೀಡದೇ ದಿವಾಳಿಯಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸುಮಾರು 5057 ಮತಗಳಿವೆ. ಅದರಲ್ಲಿ ಕಾಂಗ್ರೆಸ್ ಬೆಂಬಲಿತ ಸುಮಾರು 3500 ಗ್ರಾಪಂ ಸದಸ್ಯರಿದ್ದಾರೆ. ಹೀಗಾಗಿ ಇತರೆ ಪಕ್ಷದ 500ಕ್ಕು ಹೆಚ್ಚು ಮತಗಳನ್ನು ಪಡೆದು ಇಡೀ ರಾಜ್ಯದಲ್ಲಿಯೇ ಅತೀ ಹೆಚ್ಚು ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಬಿ.ಸೋಮಶೇಖರ್ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಡಿ.10 ರಂದು ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸಮರ್ಥ, ಸಂಪನ್ನ, ಯೋಗ್ಯ ವ್ಯಕ್ತಿಯಾದ ಬಿ.ಸೋಮಶೇಖರ್ ಅವರನ್ನು ಗುರುತಿಸಿ ಕಣಕ್ಕಿಳಿಸಲಾಗಿದ್ದು, ಇವರನ್ನು ಗೆಲ್ಲಿಸುವ ಹೊಣೆ ನಮ್ಮೆಲ್ಲರ ಮೇಲಿದೆ ಎಂದರು.
ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬಿ.ಸೋಮಶೇಖರ್ ಅವರು ಸ್ಪರ್ಧೆ ಮಾಡಿರುವುದರಿಂದ ಇಡೀ ಜಿಲ್ಲೆಯಲ್ಲಿ ಉತ್ಸಾಹ, ಸಮಾಗಮ ಸಂತೋಷದಿಂದ ಕೂಡಿದೆ. ಕಾಂಗ್ರೆಸ್ ಪಕ್ಷವು ಅಭಿವೃದ್ಧಿ ಕೆಲಸಗಳನ್ನು ಮಾಡಿ ಮತಕೇಳುತ್ತಿದೆ. ಬಿಜೆಪಿ ಜನರ ಭಾವನೆಗಳನ್ನು ಕೆರಳಿಸಿ ಮತ ಕೇಳುತ್ತಿದೆ ಎಂದರು.
ಕಾಂಗ್ರೆಸ್ ಪಕ್ಷದ ಅವಧಿಯಲ್ಲಿ ಜಾರಿಯಾದ ನೂರಾರು ಅಭಿವೃದ್ಧಿ ಕೆಲಸಗಳು ಇಂದಿಗೂ ಕಣ್ಮುಂದೆ ಇವೆ. ಅತ್ಯುತ್ತಮ ಕೆಲಸಗಳನ್ನು ಮಾಡಿದರೂ ಸಹ ಕಳೆದ ಬಾರಿ ಚುನಾವಣೆಯಲ್ಲಿ ಪರಭವಗೊಳ್ಳಬೇಕಾಯಿತು. ರಾಜ್ಯ ಮತ್ತು ಕೇಂದ್ರದಲ್ಲಿರುವ ಭ್ರಷ್ಟ ಹಾಗೂ ಜನರ ವಿರೋಧಿ ಸರ್ಕಾರವನ್ನು ಕಿತ್ತೊಗೆಯಲು ಮತದಾರರೆಲ್ಲರೂ ಸರ್ವ ಸನ್ನದ್ದಧರಾಗಬೇಕಿದೆ ಎಂದರು.

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾತನಾಡಿ, 2013-18ರವೆರೆಗೆ ಜಿಲ್ಲೆಯಲ್ಲಿ ಎಲ್ಲಿ ನೋಡಿದರೂ ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದವು. ಆದರೀಗ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಭಿವೃದ್ಧಿ ಕೆಲಸಗಳು ಎಲ್ಲೂ ಕಾಣುತ್ತಿಲ್ಲ. ಹೀಗಾಗಿ ಮತದಾರರು ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಅರಿತು ಮತ ನೀಡಬೇಕು ಎಂದರು.

ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರಕಾರ ಕಾಂಗ್ರೆಸ್ ಪಕ್ಷ ಮಾಡಿದ ಸಾಧನೆಗಳನ್ನು ನಾವು ಮಾಡಿದ್ದೇವೆ ಎಂದು ಹೆಳಿಕೊಂಡು ಜನರ ದಿಕ್ಕು ತಪ್ಪಿಸುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯನವರು ತಮ್ಮ ಆಡಳಿತದ ಅವಧಿಯಲ್ಲಿ ಹಿಂದುಳಿದ ವರ್ಗ, ದಲಿತರು ಹಾಗೂ ಎಲ್ಲ ವರ್ಗದ ಜನರ ಪರವಾಗಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ ಹೊಳಲ್ಕೆರೆ, ಚಳ್ಳಕೆರೆ, ಮೊಳಕಾಲ್ಮೂರು ತಾಲೂಕಿನ ಕೆರೆಗಳನ್ನು ಸೇರಿಸಿದ್ದು ಹಾಗೂ ವಾಣ ವಿಲಾಸ ಜಲಾಶಯಕ್ಕೆ ನೀರು ಹರಿಸಿದ ಕೀರ್ತಿ ಕಾಂಗ್ರೆಸ್ ಸರಕಾರಕ್ಕೆ ಸಲ್ಲುತ್ತದೆ. ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಬೇಕಾಗಿರುವುದರಿಂದ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಸೋಮಶೇಖರ್‍ರವರನ್ನು ಗೆಲ್ಲಿಸಬೇಕು ಎಂದು ಗ್ರಾಪಂ ಸದಸ್ಯರ ಬಳಿ ಮನವಿ ಮಾಡಿಕೊಂಡರು.

ಮೊಳಕಾಲ್ಮೂರು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಮಾತನಾಡಿ, ಸಚಿವ ಶ್ರೀರಾಮುಲು ಡಿಸಿಎಂ ಆಗುತ್ತೇನೆ, ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡುತ್ತೇನೆ ಎಸ್‍ಟಿ ಮೀಸಲಾತಿಯನ್ನು ಶೇ. 7.5ಕ್ಕೆ ಏರಿಸುತ್ತೇನೆ, ಎಂದು ಸುಳ್ಳು ಭರವಸೆ ನೀಡಿ ಚುನಾವಣೆ ಗೆದ್ದರು. ಆದರೆ ಒಂದೇ ಒಂದು ಭರವಸೆಯನ್ನು ಅವರಿಂದ ಈಡೇರಿಸುವುದಕ್ಕೆ ಸಾಧ್ಯವಾಗಿಲ್ಲ. ಹೀಗಾಗಿ ಶ್ರೀರಾಮುಲು ಅವರ ರಕ್ತ ಲವ್ ಲೆಟರ್ ಬರೆಯಲು ಯೋಗ್ಯವೇ ಹೊರತು ಮೀಸಲಾತಿ ಹೆಚ್ಚಳ ಮಾಡುವುದಕ್ಕೆ ಅಲ್ಲ ಎಂದು ವಾಲ್ಮೀಕಿ ಸ್ವಾಮೀಜಿಗಳು ನೀಡಿರುವ ಹೇಳಿಕೆ ಸರಿಯಾಗಿದೆ ಎಂದು ಹೇಳಿದರು.

ಹೊಸದುರ್ಗ ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ಮಾತನಾಡಿ, ಕಾಂಗ್ರೆಸ್‍ನಿಂದ ಗೆದ್ದಂತಹ ಸದಸ್ಯ ರಘು ಆಚಾರ್‍ರವರು ಜಿಲ್ಲೆಯಲ್ಲಿಯೇ ಇದ್ದರು. ಆದರೆ ಈಗಿನ ಜಿಲ್ಲಾ ಉಸ್ತುವಾರಿ ಸಚಿವರು ಎಷ್ಟು ಬಾರಿ ಜಿಲ್ಲೆಗೆ ಭೇಟಿ ಕೊಟ್ಟಿದ್ದಾರೆ, ಎಷ್ಟು ಬಾರಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದಾರೆ, ಮಳೆ ಹಾನಿ ಸಂದರ್ಭದಲ್ಲಿ ಯಾವ ತಾಲೂಕಿಗೆ ಭೇಟಿ ಕೊಟ್ಟಿದ್ದಾರೆ, ಯಾವ ಬಡ ಜನರ ಸಮಸ್ಯೆ ಆಲಿಸಿದ್ದಾರೆ ಎಂಬ ಪ್ರಶ್ನೆಗಳಿಗೆ ಮೊದಲು ಉತ್ತರಿಸಲಿ ಎಂದು ಸವಾಲು ಹಾಕಿದರು.

ಎ.ವಿ.ಉಮಾಪತಿ ಡಿಸಿಸಿ ಅಧ್ಯಕ್ಷ ಎಂ.ಕೆ.ತಾಜ್‍ಫೀರ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಡಿಸಿಸಿ ಕಾರ್ಯಾಧ್ಯಕ್ಷ ಹಾಲಸ್ವಾಮಿ, ವಿಧಾನ ಪರಿಷತ್ತು ಮಾಜಿ ಸದಸ್ಯೆ ಜಯಮ್ಮ ಬಾಲರಾಜ್, ಅಸಂಘಟತ ಕಾರ್ಮಿಕರ ಘಟಕದ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ, ಡಿಸಿಸಿ ಮಾಜಿ ಅಧ್ಯಕ್ಷ ಫಾತ್ಯರಾಜನ್, ಜಿಪಂ ಮಾಜಿ ಅಧ್ಯಕ್ಷ ಶಶಿಕಲಾ ಸುರೇಶ್ ಬಾಬು, ಜಿಪಂ ಮಾಜಿ ಸದಸ್ಯರಾದ ಆರ್. ನರಸಿಂಹರಾಜು, ಡಿ.ಕೆ.ಶಿವಮೂರ್ತಿ, ಕೃಷ್ಣಮೂರ್ತಿ, ಡಾ.ಅನಂತ್, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಗೀತನಂದಿನಿಗೌಡ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಉಲ್ಲಾಸ್, ಹೊಳಲ್ಕೆರೆ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ರಂಗಸ್ವಾಮಿ, ಜಿಲ್ಲಾ ಕಾಂಗ್ರೆಸ್‍ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಡಿ.ಎನ್.ಮೈಲಾರಪ್ಪ ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *