April 24, 2024

Chitradurga hoysala

Kannada news portal

ನಾಳೆ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ವ್ಯಾಪ್ತಿ ಗ್ರಾಮ ಪಂಚಾಯಿತಿ ಸದಸ್ಯರುಗಳ ಸಭೆ: ಅಭ್ಯರ್ಥಿ ಬಿ.ಸೋಮಶೇಖರ್ ಭಾಗಿ

1 min read




ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯಿತಿ ಸದಸ್ಯರುಗಳ ಸಭೆ

ಹೊಳಲ್ಕೆರೆ:

ಚಿತ್ರದುರ್ಗ ಸ್ಥಳೀಯ ಸಂಸ್ಥೆ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಜಿ.ಸೋಮಶೇಖರ್ ಪರ ಮತಯಾಚನೆ ಮಾಡಲು ಡಿಸೆಂಬರ್ 6 ರಂದು ಬೆಳಗ್ಗೆ 10 ಗಂಟೆಯಿಂದ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯಿತಿ ಸದಸ್ಯರುಗಳ ಸಭೆಯನ್ನು ಕರೆಯಲಾಗಿದೆ.

ಬೆಳಗ್ಗೆ 10 ಗಂಟೆಗೆ ಹೆಚ್.ಡಿ.ಪುರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯತಿ ಸದಸ್ಯರ ಸಭೆಯನ್ನು ಹೆಚ್.ಡಿ.ಪುರ ಗ್ರಾಮದ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ತಾಳ್ಯ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯಿತಿ ಸದಸ್ಯರುಗಳ ಸಭೆಯನ್ನು ಅವಿನಹಟ್ಟಿಯಲ್ಲಿ ಜರುಗಲಿದೆ.

ಮಧ್ಯಾಹ್ನ 12 ಗಂಟೆಗೆ ರಾಮಗಿಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ಸದಸ್ಯರ ಸಭೆಯನ್ನು ರಾಮಗಿರಿ ವಿರಕ್ತ ಮಠದಲ್ಲಿ ನಡೆಯಲಿದೆ.
ಮಧ್ಯಾಹ್ನ 1 ಗಂಟೆಗೆ ಮಲ್ಲಾಡಿಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ಸದಸ್ಯರ ಸಭೆಯೂ ಮಲ್ಲಾಡಿಹಳ್ಳಿ ಕಲ್ಯಾಣ ಮಂಟಪ ನಡೆದರೆ, ಮಧ್ಯಾಹ್ನ 2 ಗಂಟೆಗೆ ಬಿ.ದುರ್ಗ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ಸದಸ್ಯರ ಸಭೆಯೂ ಬಿ.ದುರ್ಗದಲ್ಲಿ ನಡೆಯಲಿದೆ.

ಸಭೆಯಲ್ಲಿ ಪ್ರತಿಯೊಬ್ಬ ಸದಸ್ಯರೊಂದಿಗೆ ಅಭ್ಯರ್ಥಿ ಬಿ.ಸೋಮಶೇಖರ್ ರವರು ಮಾತನಾಡಲಿದ್ದಾರೆ. ಸಭೆಯಲ್ಲಿ ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಶಾಸಕರು, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರು, ಕಾರ್ಯಕರ್ತರು, ಮುಖಂಡರು ಭಾಗವಹಿಸಲಿದ್ದಾರೆ ಎಂದು ಹೊಳಲ್ಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

About The Author

Leave a Reply

Your email address will not be published. Required fields are marked *