ಕೋವಿಡ್ ಗೆ ತುತ್ತಾದರು ಸಹ ಆಸ್ಪತ್ರೆಯಿಂದಲೇ ಕೆಲಸ ನಿರ್ವಹಿಸಿ ಕರ್ತವ್ಯ ನಿಷ್ಠೆ ಮೆರೆದ ಸಿಎಂ
1 min read77 ವರ್ಷದ ಯಡಿಯೂರಪ್ಪ ಆಸ್ಪತ್ರೆಯಲ್ಲಿ ವಿಶ್ರಾಂತಿಯ ನಡುವೆಯೂ ಅತಿ ಮುಖ್ಯವಾದ ಕೆಲಸವನ್ನು ನಿರ್ವಹಿಸುವ ಮೂಲಕ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ಶೀಘ್ರದಲ್ಲೇ ಆಸ್ಪತ್ರೆಯಿಂದ ಅವರು ಬಿಡುಗಡೆ ಹೊಂದಲಿದ್ದಾರೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು: ಕೊರೋನಾ ಸೋಂಕಿನ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನಾರೋಗ್ಯದ ನಡುವೆಯು ಇಂದು ತಮ್ಮ ಕೆಲಸವನ್ನು ಆಸ್ಪತ್ರೆಯಿಂದಲೇ ನಿರ್ವಹಿಸಿದ್ದಾರೆ. ಮಹತ್ವದ ಕಡತಗಳ ಪರೀಶೀಲನೆ ನಡೆಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕಳೆದ ಶನಿವಾರ ಕೊರೋನಾ ಸೋಂಕು ತಗುಲಿತ್ತು. ಹೀಗಾಗಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಅವರ ಆರೋಗ್ಯದ ಕುರಿತು ಮಾಹಿತಿ ನೀಡಿದ್ದ ವೈದ್ಯರು, “ಅವರ ಆರೋಗ್ಯ ಸ್ಥಿರವಾಗಿದೆ” ಎಂದು ತಿಳಿಸಿದ್ದರು. ಅಲ್ಲದೆ, ವಿಶ್ರಾಂತಿ ತೆಗೆದುಕೊಳ್ಳುವಂತೆಯೂ ಸೂಚಿಸಿದ್ದರು.
ಆದರೆ, 77 ವರ್ಷದ ಯಡಿಯೂರಪ್ಪ ಆಸ್ಪತ್ರೆಯಲ್ಲಿ ವಿಶ್ರಾಂತಿಯ ನಡುವೆಯೂ ಅತಿ ಮುಖ್ಯವಾದ ಕೆಲಸವನ್ನು ನಿರ್ವಹಿಸುವ ಮೂಲಕ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ಅವರಿಗೆ ನೀಡಲಾಗುತ್ತಿರುವ ಎಲ್ಲಾ ಕಡತಗಳನ್ನೂ ಸ್ಯಾನಿಟೈಜ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಅಲ್ಲದೆ, ಶೀಘ್ರದಲ್ಲೇ ಅವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿದ್ದಾರೆ ಎಂದು ಹೇಳಲಾಗುತ್ತಿದೆ.