ವಿವಿಧ ನಿಗಮಗಳ ಯೋಜನೆಗೆ ಅರ್ಜಿ ಆಹ್ವಾನ
1 min readವಿವಿಧ ಅಭಿವೃದ್ಧಿ ನಿಗಮಗಳಿಂದ ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನ
ಚಿತ್ರದುರ್ಗ :
ಡಾ.ಬಿ,ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಜನರ ಆರ್ಥಿಕ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ವಿವಿಧ ಯೋಜನೆಗಳ ಸಾಲ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆ ದಿನವಾಗಿದೆ.
ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ, ನೇರಸಾಲ, ಉದ್ಯಮ ಶೀಲತಾ, ಮೈಕ್ರೋ ಕ್ರೆಡಿಟ್ (ಪ್ರೇರಣಾ ಮಹಿಳಾ ಸ್ವ ಸಹಾಯ ಗುಂಪುಗಳಿಗೆ), ಭೂ ಒಡೆತನ ಯೋಜನೆಯೂ ಸೇರಿದಂತೆ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯೋಮಿತಿ 21 ರಿಂದ 50 ವರ್ಷದೊಳಗಿರಬೇಕು. ಗಂಗಾ ಕಲ್ಯಾಣ ಯೋಜನೆಗೂ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಆಯಾ ನಿಗಮದ ವೆಬ್‍ಸೈಟ್ ವಿಳಾಸ ಡಾ.ಬಿ,ಆರ್,ಅಂಬೇಡ್ಕರ್ ಅಭಿವೃದ್ದಿ ನಿಗಮ http://adcl.karnataka.gov.in, ಕರ್ನಾಟಕ ಆದಿಜಾಂಬದ ಅಭಿವೃದ್ಧಿ ನಿಗಮ- http://adijambava.karnataka.gov.in ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ- http://banjarathanda.kar.nic.in, ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮ- http://ksskdc.kar.gov.in ಈ ವೆಬ್‍ಸೈಟ್‍ನಲ್ಲಿ ಡೌನ್‍ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ನಿಗಮದ ಜಿಲ್ಲಾ ಕಚೇರಿಗೆ ಅಥವಾ ಆನ್‍ಲೈನ್ ಭರ್ತಿ ಮಾಡಿ, ಅವಶ್ಯ ದಾಖಲಾತಿಗಳೊಂದಿಗೆ ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಬಹುದು.
ಕರ್ನಾಟಕ ಭೋವಿ ಅಭಿವೃದ್ದಿ ನಿಗಮ ಜಿಲ್ಲಾ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದುಕೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ನಿಗಮದ ಚಿತ್ರದುರ್ಗ ಜಿಲ್ಲಾ ಕಛೇರಿ ದೂರವಾಣಿ ಸ: 08194 231017 ಗೆ ಸಂಪರ್ಕಿಸಬಹುದು.