April 24, 2024

Chitradurga hoysala

Kannada news portal

ಜ.01ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆ : ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಧನಂಜಯ

1 min read




ಜ.01ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆ

ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಸಮಾರಂಭವನ್ನು ಜನವರಿ 01ರಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ ತರಾಸು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವರಾದ ಎ.ನಾರಾಯಣಸ್ವಾಮಿ ಘನ ಉಪಸ್ಥಿತಿವಹಿಸುವರು. ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಉದ್ಘಾಟನೆ ನೆರವೇರಿಸುವರು. ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಹಾಗೂ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಶಾಸಕರಾದ ಗೂಳಿಹಟ್ಟಿ ಡಿ.ಶೇಖರ್, ಟಿ.ರಘುಮೂರ್ತಿ, ಪೂರ್ಣಿಮಾ ಕೆ.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ, ಜಿ.ರಘು ಆಚಾರ್, ಚಿದಾನಂದ ಎಂ ಗೌಡ, ರಾಜ್ಯ ಖನಿಜ ನಿಗಮ ಅಧ್ಯಕ್ಷ ಎಸ್.ಲಿಂಗಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಟಿ.ಬದರಿನಾಥ್, ನಗರಸಭೆ ಅಧ್ಯಕ್ಷ ಬಿ.ತಿಪ್ಪಮ್ಮ, ಜಿಲ್ಲಾ ವಿಶ್ವಕರ್ಮ ಸಮಾಜ ಅಧ್ಯಕ್ಷ ಪಿ.ತಿಪ್ಪೇಶಾಚಾರ್ಯ, ವಿಶ್ವಕರ್ಮ ಸಮಾಜ ಅಧ್ಯಕ್ಷ ಎ.ಶಂಕರಾಚಾರ್ ಭಾಗವಹಿಸಲಿದ್ದಾರೆ.
ಶಿಲ್ಪಿ ಆರ್.ಸುರೇಶಾಚಾರ್ಯ ಉಪನ್ಯಾಸ ನೀಡುವರು. ಮೊಳಕಾಲ್ಮುರಿನ ಕಲ್ಲೇಶ್ ಮತ್ತು ತಂಡದವರು ಗೀತಗಾಯನ ನಡೆಸಿಕೊಡುವರು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಧನಂಜಯ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *