April 29, 2024

Chitradurga hoysala

Kannada news portal

ಕೋವಿಡ್-19ರ ನಿಯಂತ್ರಣಕ್ಕೆ ಹಲವು ನಿರ್ಬಂಧಗಳು : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶ

1 min read




ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶ
ಕೋವಿಡ್-19ರ ನಿಯಂತ್ರಣಕ್ಕೆ ಹಲವು ನಿರ್ಬಂಧಗಳು

ಚಿತ್ರದುರ್ಗ :
ಕೋವಿಡ್-19ರ ಮೂರನೇ ಅಲೆಯನ್ನು ನಿಯಂತ್ರಿಸುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಸರ್ಕಾರದ ಮಾರ್ಗಸೂಚಿಯಂತೆ ಜನವರಿ 19ರವರೆಗೆ ಜಿಲ್ಲೆಯಾದ್ಯಂತ ವಾರಾಂತ್ಯದ ಕಫ್ರ್ಯೂ ಸೇರಿದಂತೆ ಕೋವಿಡ್ ಮಾರ್ಗಸೂಚಿಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ.
ಪ್ರತಿ ನಿತ್ಯ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ರಾತ್ರಿ ಕಫ್ರ್ಯೂ ಜಾರಿಯಲ್ಲಿರಲಿದೆ. ಸರ್ಕಾರಿ ಕಚೇರಿಗಳು ವಾರದಲ್ಲಿ ಐದು ದಿನಗಳು ಮಾತ್ರ ಕಾರ್ಯನಿರ್ವಹಿಸಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ. ಸಾರ್ವಜನಿಕ ಸಾರಿಗೆ ಸೇವೆ ಕೋವಿಡ್ ನಿಯಮದನ್ವಯ ಇರಲಿದೆ.
ಚಿತ್ರಮಂದಿರ, ಪಬ್, ಕ್ಲಬ್, ರೆಸ್ಟೋರೆಂಟ್, ಹೋಟೆಲ್‍ಗಳಲ್ಲಿ ಕೂಡ ಒಟ್ಟು ಆಸನದ ಸಾಮಥ್ರ್ಯದ ಶೇ.50ರಷ್ಟು ಆಸನಗಳನ್ನು ಭರ್ತಿ ಮಾಡಲು ಅವಕಾಶ ನೀಡಲಾಗಿದೆ. ಕೋವಿಡ್ ಎಸ್‍ಓಪಿ ಹಾಗೂ ಎರಡು ಡೋಸ್ ಲಸಿಕೆ ಪಡೆದಿರುವುದು ಕಡ್ಡಾಯವಾಗಿದೆ. ಹೊರಾಂಗಣ ಮದುವೆಗಳಿಗೆ 200 ಜನರಿಗೆ ಒಳಾಂಗಣ ಮದುವೆಗೆ 100 ಜನರನ್ನಷ್ಟೇ ಮಿತಿಗೊಳಿಸಲಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಸ್ಮಿಮಿಂಗ್ ಪೂಲ್, ಜಿಮ್, ಕ್ರೀಡಾ ಸಂಕೀರ್ಣ, ಸ್ಟೇಡಿಯಂ ಸೇರಿದಂತೆ ಇತ್ಯಾದಿ ಸ್ಥಳಗಳಲ್ಲಿ ತಮ್ಮ ಗ್ರಾಹಕರು, ಪ್ರೇಕ್ಷಕರ ಪ್ರವೇಶ ಸಾಮಥ್ರ್ಯದ ಶೇ.50ರಷ್ಟು ಜನರೊಂದಿಗೆ ಮಾತ್ರ ಕಾರ್ಯನಿರ್ವಹಿಸಬೇಕು. ಇಲ್ಲಿಗೆ ಆಗಮಿಸುವವರು ಹಾಗೂ ಸಿಬ್ಬಂದಿ ಎಲ್ಲರೂ ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರುವುದು, ಮಾಸ್ಕ್ ಧರಿಸುವುದು ಸೇರಿದಂತೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಎಲ್ಲ ರೀತಿಯ ಧರಣಿ, ರ್ಯಾಲಿ, ಪ್ರತಿಭಟನೆ ನಡೆಸುವುದನ್ನು ನಿರ್ಬಂಧಿಸಲಾಗಿದೆ.
ವಾರಂತ್ಯದ ಕಪ್ರ್ಯೂ ಶುಕ್ರವಾರ ರಾತ್ರಿ 8 ರಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇತರೆ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಕೋವಿಡ್-19 ನಿರ್ವಹಣೆಯ ಕ್ರಮಗಳನ್ನು ಮತ್ತು ರಾಷ್ಟ್ರೀಯ ನಿರ್ದೇಶನಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯನ್ನು ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51 ರಿಂದ 60ರ ಉಪಬಂಧಗಳು ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *