May 1, 2024

Chitradurga hoysala

Kannada news portal

ಕನ್ನಡನಾಡು ನುಡಿಗೆ ಅಪಾರ ಸೇವೆ ಸಲ್ಲಿಸಿದ ಹಿರಿಯ ಸಾಹಿತಿ, ಹೋರಾಟಗಾರ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ)(85) ನಿಧನ

1 min read

ಕನ್ನಡನಾಡು ನುಡಿಗೆ ಅಪಾರ ಸೇವೆ ಸಲ್ಲಿಸಿದ ಹಿರಿಯ ಸಾಹಿತಿ, ಹೋರಾಟಗಾರ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ ನಿಧನ

ಬೆಂಗಳೂರು:

ಕನ್ನಡನಾಡು ನುಡಿಗೆ ಅಪಾರ ಸೇವೆ ಸಲ್ಲಿಸಿದ ಹಿರಿಯ ಸಾಹಿತಿ, ಹೋರಾಟಗಾರ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ)(85) ನಿಧನರಾಗಿದ್ದಾರೆ.ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೋಟಣನಕುಂಟೆ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಬೆಳಗ್ಗೆ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಪಾರ್ಥೀವ ಶರೀರವನ್ನು ಯಲಚೇನಹಳ್ಳಿ ಸಮೀಪದ ಅವರ ನಿವಾಸಕ್ಕೆ ತೆಗೆದುಕೊಂಡು ಹೋಗಿ ನಂತರ ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಚಂಪಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಪರಿಷತ್ತಿನ ಮೂಲಗಳು ಮತ್ತು ಕುಟುಂಬದ ಮೂಲಗಳು ತಿಳಿಸಿವೆ.

1939ರಲ್ಲಿ ಅವರು ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನಲ್ಲಿ ಜನಿಸಿದ್ದರು. ಹತ್ತಿಮತ್ತೂರು- ಹಾವೇರಿ ಶಾಲೆ-ಹೈಸ್ಕೂಲ್ ಮುಗಿಸಿ 1956ರಲ್ಲಿ ಕರ್ನಾಟಕ ಕಾಲೇಜಿಗೆ ಸೇರಿದರು. 1960ರಲ್ಲಿ ಬಿಎ ಪೂರೈಸಿ ಕರ್ನಾಟಕ ವಿಶ್ವವಿದ್ಯಾಲಯದಿಂದ 1962ರಲ್ಲಿ ಎಂ.ಎ. ಮುಗಿಸಿದರು. 1969ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾದರು.ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಅವರು ಪ್ರಾಧ್ಯಾಪಕರಾಗಿ ಚೇರ್ಮನ್ ಆಗಿ ಸೇವೆ ಸಲ್ಲಿಸಿದ್ದಾರೆ. 1980-82ರಲ್ಲಿ ಧಾರವಾಡದ ಅಖಿಲ ಕರ್ನಾಟಕ ಕೇಂದ್ರ ಕ್ರಿಯಾ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಗೋಕಾಕ್ ಚಳವಳಿಗೆ ಪ್ರೇರಣಿ ನೀಡಿದ ಪ್ರಮುಖರಲ್ಲಿ ಚಂಪಾ ಒಬ್ಬರಾಗಿದ್ದರು. ಕನ್ನಡದ ಕವಿ, ನಾಟಕಕಾರ, ಹೋರಾಟಗಾರರಾದ ಚಂದ್ರಶೇಖರ ಪಾಟೀಲ ಅವರು ‘ಚಂಪಾ’ ಎಂದೇ ಪ್ರಖ್ಯಾತರಾಗಿದ್ದರು.

About The Author

Leave a Reply

Your email address will not be published. Required fields are marked *