April 26, 2024

Chitradurga hoysala

Kannada news portal

ಬೆಂಗಳೂರು ಭಾಗದವರಿಗೆ ನೀರು ಕೊಡಿಸಲು ಇಲ್ಲಿಂದ ಹೋದವರು ಚಿತ್ರದುರ್ಗ ಜಿಲ್ಲೆಯ ಬಗ್ಗೆ ಎಷ್ಟು ಕಾಳಜಿ ಹೊಂದಿದ್ದಾರೆ ಎಂಬುದು ಇದರಿಂದಲೇ ಅರ್ಥವಾಗುತ್ತದೆ ಎಂದು ಕಾಂಗ್ರೆಸ್ ಮುಖಂಡರ ವಿರುದ್ಧ : MLC ನವೀನ್ ಕಟುಕಿದ್ದರೆ

1 min read




ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಆರೋಪ
ಕೋವಿಡ್ ಹೆಚ್ಚಳಕ್ಕೆ ಡಿಕೆಶಿ ಕಾರಣ

ಬೆಂಗಳೂರು ಭಾಗದವರಿಗೆ ನೀರು ಕೊಡಿಸಲು ಇಲ್ಲಿಂದ ಹೋದವರು ಚಿತ್ರದುರ್ಗ ಜಿಲ್ಲೆಯ ಬಗ್ಗೆ ಎಷ್ಟು ಕಾಳಜಿ ಹೊಂದಿದ್ದಾರೆ ಎಂಬುದು ಇದರಿಂದಲೇ ಅರ್ಥವಾಗುತ್ತದೆ ಎಂದು ಕಾಂಗ್ರೆಸ್ ಮುಖಂಡರ ವಿರುದ್ಧ : MLC ನವೀನ್  ಕುಟುಕಿದ್ದರೆ.

ಚಿತ್ರದುರ್ಗ:
ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾರಣ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಆರೋಪಿಸಿದರು.
ಇಲ್ಲಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಶಿವಕುಮಾರ್ ಅವರು ಕೋವಿಡ್ ಇಲ್ಲ. ಅದು ಸರ್ಕಾರದ ಸೃಷ್ಟಿ ಎಂಬ ಹೇಳಿಕೆ ನೀಡುವ ಮೂಲಕ ಜನ ವಿರೋಧದ ನಡುವೆಯೂ ಪಾದಯಾತ್ರೆ ಕೈಗೊಂಡು ಆ ಜಿಲ್ಲೆಗಳಲ್ಲಿ ಪ್ರಕರಣಗಳನ್ನು ಏರುಗತಿಯಲ್ಲಿ ಹೆಚ್ಚಿಸಿ ಜನಸಾಮಾನ್ಯರ ಜೀವದ ಜೊತೆ ಆಟವಾಡಿದ್ದಾರೆ ಎಂದುದೂರಿದರು.
ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರದು ಮೇಕೆದಾಟು ಪಾದಯಾತ್ರೆ ಅಲ್ಲ. ಅದು ಸಿಎಂ ಕುರ್ಚಿಗಾಗಿ ನಡೆದ ರನ್ನಿಂಗ್ ರೇಸ್ ಎಂದು ಛೇಡಿಸಿದರು.
ಚಿತ್ರದುರ್ಗ ಭಾಗದ ಕಾಂಗ್ರೆಸ್ ಮುಖಂಡರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಆದರೆ, ಅವರದೇ ಕಾಂಗ್ರೆಸ್ ಸರ್ಕಾರ ಇದ್ದಾಗ ಭದ್ರಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕೆ ಅರ್ಧ ಕಿಲೋಮೀಟರ್ ಪಾದಯಾತ್ರೆ ಮಾಡಲಿಲ್ಲ. ಪೂರ್ಣಗೊಳಿಸಲು ಪ್ರಯತ್ನಿಸಲಿಲ್ಲ. ಬೆಂಗಳೂರು ಭಾಗದವರಿಗೆ ನೀರು ಕೊಡಿಸಲು ಇಲ್ಲಿಂದ ಹೋದವರು ಚಿತ್ರದುರ್ಗ ಜಿಲ್ಲೆಯ ಬಗ್ಗೆ ಎಷ್ಟು ಕಾಳಜಿ ಹೊಂದಿದ್ದಾರೆ ಎಂಬುದು ಇದರಿಂದಲೇ ಅರ್ಥವಾಗುತ್ತದೆ ಎಂದು ಕಾಂಗ್ರೆಸ್ ಮುಖಂಡರ ವಿರುದ್ಧ ಕುಟುಕಿದರು.
ವಿಶ್ವದೆಲ್ಲೆಡೆ ಕೋವಿಡ್ ನಿಯಂತ್ರಣಕ್ಕೆ ಬಾರದೇ ಹರಡುತ್ತಿರುವ, ಹರಡುತ್ತಿದ್ದ ಸಂದರ್ಭದಲ್ಲಿ ಭಾರತದಲ್ಲಿ ಅತಿ ಹೆಚ್ಚು ಸಾವು, ನೋವು ಸಂಭವಿಸುತ್ತದೆ. ಇದನ್ನು ನಿಭಾಯಿಸುವ ಶಕ್ತಿ ಭಾರತಕ್ಕಿಲ್ಲ ಎಂಬ ಹೇಳಿಕೆಗಳೂ ವ್ಯಕ್ತವಾಗಿದ್ದವು. ಆದರೆ, ಅಷ್ಟೊಂದು ಪ್ರಮಾಣದಲ್ಲಿ ತೊಂದರೆ ಆಗಲಿಲ್ಲ. ದೇಶವಾಸಿಗಳನ್ನು ರಕ್ಷಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯತ್ನ ಸಫಲವಾಗಿದೆ. ಒಂದು ವರ್ಷದಲ್ಲಿ 156ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ಹಾಕುವ ಮೂಲಕ ಜಗತ್ತಿನ ಗಮನ ಸೆಳೆದಿದೆ. ಇದು ಕೇಂದ್ರ ಸರ್ಕಾರದ ಸಾಧನೆ ಅಲ್ಲದೆ, ಮತ್ತಿನ್ನೇನು ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ 9 ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 10.53 ಲಕ್ಷ ಜನ ಲಸಿಕೆ ಹಾಕಿಸಿಕೊಂಡಿದ್ದಾರೆ. ವಿಜ್ಞಾನಿಗಳು, ಲಸಿಕಾ ತಯಾರಿಕೆ ಕಂಪನಿಗಳಿಗೆ ವಿಶೇಷ ಮನ್ನಣೆ ನೀಡುವುದರ ಜತೆಗೆ ಆರ್ಥಿಕ ನೆರವನ್ನು ಪ್ರಧಾನಿ ಅವರು ಕೊಟ್ಟಿದ್ದರಿಂದ ದೇಶದಲ್ಲಿ ಬಹುಬೇಗ ಲಸಿಕೆ ಕಂಡುಹಿಡಿಯಲು ಸಾಧ್ಯವಾಯಿತು ಎಂದು ಹೇಳಿದರು.
ಮೊದಲ, ಎರಡನೇ ಅಲೆಗಿಂತ ಮೂರನೇ ಅಲೆ ಅತಿ ವೇಗವಾಗಿ ಹರಡುತ್ತಿದ್ದರು ಆಸ್ಪತ್ರೆಗೆ ಸೇರುವವರ ಸಂಖ್ಯೆ ಕಡಿಮೆಯಾಗಿದೆ. ಇದಕ್ಕೆ ನಮ್ಮ ವಿಜ್ಞಾನಿಗಳು ಕಂಡು ಹಿಡಿದ ಲಸಿಕೆ ಹಾಗೂ ಆರೋಗ್ಯ ಇಲಾಖೆಯ ಪ್ರಯತ್ನ ಕಾರಣ ಎಂದರು.
ಜಿಲ್ಲೆಯೂ ಕೋವಿಡ್ ಲಸಿಕೆ ಎರಡನೇ ಡೋಸ್ ಪ್ರಗತಿ ವಿಚಾರದಲ್ಲಿ ರಾಜ್ಯದ ಕೊನೆಯ ಐದು ಜಿಲ್ಲೆಗಳಲ್ಲಿ ಸ್ಥಾನ ಪಡೆದುಕೊಂಡಿದೆ. ಆದ್ದರಿಂದ ಶೀಘ್ರದಲ್ಲೇ ಜಿಲ್ಲಾ ಆರೋಗ್ಯಾಧಿಕಾರಿ ಅವರ ಜೊತೆ ಸಭೆ ನಡೆಸಿ ಯಾರು ಲಸಿಕೆ ಪಡೆದಿಲ್ಲವೋ ಅಂತವರಿಗೆ ಲಸಿಕೆ ಹಾಕುವ ಮೂಲಕ ಪ್ರಗತಿ ಸಾಧನೆಯೊಂದಿಗೆ ಮೊದಲ ಐದು ಜಿಲ್ಲೆಗಳಲ್ಲಿ ಸ್ಥಾನ ಪಡೆಯಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗೊಂದಲ ಸೃಷ್ಟಿಸದೇ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಪಕ್ಷಾತೀತವಾಗಿ ನಿಯಂತ್ರಣಕ್ಕೆ ಕೈಜೋಡಿಸಬೇಕು ಎಂದು ನವೀನ್ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂಪತ್‍ಕುಮಾರ್, ಜಿಲ್ಲಾ ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್, ಜಿಲ್ಲಾ ಓಬಿಸಿ ಮೋರ್ಚಾದ ತಿಮ್ಮಣ್ಣ ಇದ್ದರು.
ಫೋಟೋ ವಿವರ: ಚಿತ್ರದುರ್ಗ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಮಾತನಾಡಿದರು.

About The Author

Leave a Reply

Your email address will not be published. Required fields are marked *