ಗೊಲ್ಲ ಸಮುದಾಯದ ಏಕೈಕ ಶಾಸಕಿ ಪೂರ್ಣಿಮಾ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ:ಸಿರಿಯಣ್ಣ
1 min readವರದಿ: ವಿರೇಶ್ ಚಳ್ಳಕೆರೆ
ಚಳ್ಳಕೆರೆ: ರಾಜ್ಯದಲ್ಲಿ ಸುಮಾರು 35 ಲಕ್ಷ ಜನಸಂಖ್ಯೆ ಇರುವ ಈ ಸಮುದಾಯದ ಏಕೈಕ ಮಹಿಳಾ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಬಿಜೆಪಿ ಮುಖ್ಯ ಮಂತ್ರಿ ಬಿ.ಎಸ್. ಯುಡಿಯೂರಪ್ಪನವರ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಚಳ್ಳಕೆರೆ ಬಿಜೆಪಿ ಮಂಡಲ್ ಮಾಜಿ ಅಧ್ಯಕ್ಷ ಹಾಗೂ ಗೊಲ್ಲ ಸಮುದಾಯದ ಹಿರಿಯ ಮುಖಂಡ ಬಿ.ವಿ.ಸಿರಿಯಣ್ಣ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನಗರದ ತ್ಯಾಗರಾಜ ನಗರದ ಶ್ರೀಕೃಷ್ಣ ಗೊಲ್ಲರ ಹಾಸ್ಟೆಲ್ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿರಿಯೂರು ಶಾಸಕಿ ಪೂರ್ಣಿಮ ಶ್ರೀನಿವಾಸ್ ಇವರಿಗೆ ಸಚಿವ ಸ್ಥಾನ ನೀಡಲೆ ಬೇಕು ಗೊಲ್ಲ ಸಮುದಾಯವು ಆರ್ಥಿಕವಾಗಿ ,ಶೈಕ್ಷಣಿಕವಾಗಿ ಬಹಳ ಹಿಂದುಳಿದ ಸಮುದಾಯವಾಗಿದೆ. ಗೊಲ್ಲ ಸಮುದಾಯವು ಸಮಾಜ ಮುಖಿಯಾಗಿ ಬರಲು ರಾಜಕೀಯ ಸ್ಥಾನಮಾನವು ಬೇಕಿದೆ. ಭೋಮಿಕೆಗೆ ಬರಬೇಕಾದರೆ. ಮಾಹಿಳಾ ಶಾಸಕಿ ಪೂರ್ಣಿಮಾ ಶ್ರೀನಿವಾಸ ಇವರಿಗೆ ಈ ಬಾರಿ ಸಚಿವ ಸ್ಥಾನ ನೀಡವ ಮೂಲಕ ಸಮುದಾಯ ಅಭಿವೃದ್ಧಿ ಹೆಚ್ಚು ಒತ್ತು ನೀಡುಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಪಕ್ಷಕ್ಕೆ ಚುನಾವಣಾ ಸಂದರ್ಭದಲ್ಲಿ ಹೆಚ್ಚಿನ ಮತಗಳನ್ನು ನೀಡ ಸಮುದಾಯ ಯಾದವರು. ಅದ್ದರಿಂದ ಮುಂದಿನ ದಿನಗಳಲ್ಲೂ ಸಹ ಬಿಜೆಪಿ ಪಕ್ಷಕ್ಕೆ ನಮ್ಮ ಬೆಂಬಲ ನೀಡಲಾಗುತ್ತದೆ. ಶಾಸಕಿ ಪೂರ್ಣಿಮ ಶ್ರೀನಿವಾಸ್ ಸಚಿವ ಸ್ಥಾನ ನೀಡಿ ಎಂದು ಈ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪನರಿಗೆ ಸಮುದಾಯದ ಪರವಾಗಿ ಒತ್ತಾಯಿಸುತ್ತವೆ ಎಂದರು.
ಗೊಲ್ಲ ಸಮುದಾಯ ಮುಖಂಡ ಮತ್ತು ನಿವೃತ್ತ ಪ್ರಾಂಶುಪಾಲ ದೇವಿರಪ್ಪ ಮಾತನಾಡಿ, ರಾಜ್ಯ ದಲ್ಲಿಯೇ ಗೊಲ್ಲ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದೆ. ಈ ಸಮುದಾಯದ ಅಭಿವೃದ್ಧಿಗಾಗಿ ಕಳೆದ ವಿಧಾನಸಭಾ ಕ್ಷೇತ್ರದಿಂದ ಜಯ ಸಾಧಿಸಿದ ಶಾಸಕಿ ಪೂರ್ಣಿಮಾರವರಿಗೆ ಸಚಿವ ಸ್ಥಾನ ನೀಡಬೇಕು ಎಂದರು.