ನಾಳೆ ಹೊಳಲ್ಕೆರೆ ಗೆ ಭವ್ಯ ನರಸಿಂಹಮೂರ್ತಿ : ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
1 min read


ಹೊಳಲ್ಕೆರೆಗೆ ಭವ್ಯ ನರಸಿಂಹಮೂರ್ತಿ:
ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ________________
ಚಿತ್ರದುರ್ಗ ಹೊಯ್ಸಳ ನ್ಯೂಸ್/ಹೊಳಲ್ಕೆರೆ,
ಹೊಳಲ್ಕೆರೆ:
ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸದಸ್ಯತ್ವದ ಡಿಜಿಟಲ್ ನೋದಣಿ ಅಭಿಯಾನಕ್ಕೆ ಕೆಪಿಸಿಸಿ ವಕ್ತಾರರಾಗಿರುವ ಭವ್ಯ ನರಸಿಂಹಮೂರ್ತಿ ರವರು ಶನಿವಾರ 10.30 ನಗರದ ಕಾಂಗ್ರೆಸ್ ಕಚೇರಿ ಮುಂಭಾಗ ಚಾಲನೆ ನೀಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಮಾಜಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಮಾಜಿ ಸಚಿವರಾದ ಎಚ್.ಆಂಜನೇಯ ರವರು,ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ತಾಜ್ ಪೀರ್,ಮಾಜಿ ಶಾಸಕ ಎವಿ.ಉಮಾಪತಿ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆಎಂ.ಹಾಲಸ್ವಾಮಿ ಭಾಗವಹಿಸಲಿದ್ದಾರೆ. ಆದುದರಿಂದ ಪಕ್ಷದ ಹಿರಿಯ ಮುಖಂಡರುಗಳು, ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ, ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು,ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
ಎಚ್.ಟಿ ಹನುಮಂತಪ್ಪ ತಮ್ಮ ಪತ್ರಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.