ಮಹರ್ಷಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ: ಯೋಜನೆಗಳಿಗೆ ಅರ್ಜಿ ಆಹ್ವಾನ
1 min readಚಿತ್ರದುರ್ಗ,ಆ.08: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2020-21ನೇ ಸಾಲಿಗೆ ಪರಿಶಿಷ್ಟ ಪಂಗಡದ ಫಲಾಪೇಕ್ಷಿಗಳಿಗೆ ಹಾಗೂ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆಅಲೆಮಾರಿ, ಆದಿವಾಸಿ, ಜನಾಂಗದ ಫಲಾಪೇಕ್ಷಿಗಳಿಗೆ ನಿಗಮದ ಯೋಜನೆಗಳಿಗೆ ಆಗಸ್ಟ್ 3 ರಿಂದ ಆಗಸ್ಟ್ 31 ರವರೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಫಲಾಪೇಕ್ಷಿಗಳು ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಹಾಗೂ ನಿಮಗದ ಜಿಲ್ಲಾ ಕಚೇರಿಯಿಂದಲೂ ಅರ್ಜಿಗಳನ್ನು ಸ್ವೀಕರಿಸಲು ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಚಿತ್ರದುರ್ಗ ಜಿಲ್ಲೆ ದೂರವಾಣಿ ಸಂಖ್ಯೆ: 08194-221055ಕ್ಕೆ ಸಂಪರ್ಕಿಸಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.