ಇಂದು 64 ಜನರಿಗೆ ಕೋವಿಡ್ ದೃಢ 1021ಕ್ಕೆಏರಿಕೆ
1 min read
ಚಿತ್ರದುರ್ಗ ಆ. 08:ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ ಮತ್ತೆ 64 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1021 ಕ್ಕೆ ಏರಿಕೆಯಾದಂತಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶನಿವಾರ 25 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 9, ಹೊಳಲ್ಕೆರೆ-3, ಹಿರಿಯೂರು-19, ಚಳ್ಳಕೆರೆ-15, ಹೊಸದುರ್ಗ-8 ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 10 ಸೇರಿದಂತೆ ಒಟ್ಟು 64 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಗುರುವಾರ ಒಟ್ಟು 1139 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 64 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 1021 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 16 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 527 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 478 ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 302 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 6817 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.