ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೋವಿಡ್ ಪಾಸಿಟಿವ್
1 min readಬೆಂಗಳೂರು: ರಾಜ್ಯದ ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಈ ಮಾಹಿತಿಯನ್ನು ಸ್ವತಃ ಶ್ರೀರಾಮುಲು ತನ್ನ ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.
ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೋವಿಡ್ ಪಾಸಿಟಿವ್ ಬಂದಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ. ಕೋವಿಡ್ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಸಚಿವರು ಹೇಳಿದ್ದಾರೆ.