March 28, 2024

Chitradurga hoysala

Kannada news portal

ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಫಲಾನುಭವಿಗಳ ಸಂವಾದ: ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ

1 min read

ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಫಲಾನುಭವಿಗಳ ಸಂವಾದ:ಕಾರ್ಯಕ್ರಮದ ಸಿದ್ಧತೆಗೆ

ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಸೂಚನೆ

ಚಿತ್ರದುರ್ಗಹೊಯ್ಸಳ ನ್ಯೊಸ್/

ಚಿತ್ರದುರ್ಗ:

ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಭಾರತ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೇ.31 ರಂದು ಹಿಮಾಚಲ ಪ್ರದೇಶದ ಶಿಮ್ಲಾದಿಂದ ಸಂವಾದ ನಡೆಸಲಿದ್ದಾರೆ. ಚಿತ್ರದುರ್ಗ ನಗರದ ತ.ರಾ.ಸು ರಂಗಮಂದಿರಲ್ಲಿ ಅಂದು ಬೆಳಿಗ್ಗೆ 10ಕ್ಕೆ ಸಂವಾದ ಕಾರ್ಯಕ್ರಮದ ಆಯೋಜಿಸಿದ್ದು, ಅಧಿಕಾರಿಗಳು ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಸೂಕ್ತ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಈ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಧಾನ ಮಂತ್ರಿ ಆವಾಸ್ ಯೋಜನೆ, ಕಿಸಾನ್ ಸಮ್ಮಾನ್, ಉಜ್ವಲ, ಪೋಷಣಾ ಅಭಿಯಾನ, ಮಾತೃ ವಂದನ, ಸ್ವನಿಧಿ ಯೋಜನೆ, ಗರೀಬ್ ಕಲ್ಯಾಣ ಅನ್ನ ಯೋಜನೆ, ಸ್ವಚ್ಛ ಭಾರತ ಮಿಷನ್, ಜಲ ಜೀವನ್ ಮಿಷನ್, ಒಂದು ದೇಶ ಒಂದು ಪಡಿತರ ಚೀಟಿ, ಆಯುಷ್ಮಾನ್ ಭಾರತ್ ಪಿಎಂ ಆರೋಗ್ಯ ಯೋಜನೆ, ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಮುದ್ರಾ ಯೋಜನೆಗಳ ಲಾಭ ಪಡೆದ ಸುಮಾರು 250ಕ್ಕೂ ಹೆಚ್ಚು ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಚಿವರು, ಸಂಸದರು, ಶಾಸಕರು, ನಗರ ಸ್ಥಳೀಯ ಸಂಸ್ಥೆ ಅಧ್ಯಕ್ಷರು, ಜಿಲ್ಲಾ ಪಂಚಾಯತಿ ಅಧ್ಯಕ್ಷರು, ಅಧಿಕಾರಿಗಳು ಸೇರಿದಂತೆ 500ಕ್ಕೂ ಹೆಚ್ಚು ಜನರಿಗೆ ಆಸನಗಳ ವ್ಯವಸ್ಥೆ ಕಲ್ಪಿಸಬೇಕು. ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಯವರೊಂದಿಗೆ ಸಂವಾದ ನಡೆಸಲು ಸೂಕ್ತ ವಿಡಿಯೋ ಸಂವಾದ ಕೇಂದ್ರವನ್ನು ನಿರ್ಮಿಸಬೇಕು. ವಿಡಿಯೋ ಸಂವಾದಗಳ ಪ್ರದರ್ಶನಕ್ಕೆ ಎಲ್.ಇ.ಡಿ. ಸ್ಕ್ರೀನ್ ಅಳವಡಿಸಬೇಕು. ಗಣ್ಯರಿಗೆ ಆಹ್ವಾನ ನೀಡಬೇಕು. ಫಲಾನುವಿಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆಯೊಂದಿಗೆ ಊಟ ಉಪಹಾರಗಳನ್ನು ಕಲ್ಪಿಸಬೇಕು. ಕಾರ್ಯಕ್ರಮದ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ, ಆಂಬುಲೆನ್ಸ್ ಹಾಗೂ ವೈದ್ಯರ ತಂಡ ನಿಯೋಜನೆ ಮಾಡುವಂತೆ ತಿಳಿಸಿದರು.
ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸೇರಿದಂತೆ ಸದಸ್ಯರುಗಳು ಸಂವಾದಲ್ಲಿ ಹೆಚ್ಚಾಗಿ ಪಾಲ್ಗೊಳ್ಳುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಪ್ರತಿ ಪಂಚಾಯತಿಯಿಂದ ಕನಿಷ್ಟ 2 ಸದಸ್ಯರುಗಳು ಪಾಲ್ಗೊಳ್ಳಬೇಕು ಎಂದರು.

ಸಭೆಯಲ್ಲಿ ಜಿ.ಪಂ.ಸಿಇಓ ಡಾ.ಕೆ.ನಂದಿನಿದೇವಿ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಂಗನಾಥ, ಜಂಟಿ ಕೃಷಿ ನಿರ್ದೇಶಕ ಪಿ.ರಮೇಶ್ ಕುಮಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

About The Author

Leave a Reply

Your email address will not be published. Required fields are marked *