June 27, 2022

Chitradurga hoysala

Kannada news portal

ಅವಹೇಳನಕಾರಿ ಹೇಳಿಕೆ: ಮುನ್ನೆಚ್ಚರಿಕಾ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

1 min read

ರಾಜ್ಯದಲ್ಲಿ ಶಾಂತಿ ಕಾಪಾಡಲು ಮುನ್ನೆಚ್ಚರಿಕಾ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ, ಜೂನ್ 11:

ಅವಹೇಳನಕಾರಿ ಹೇಳಿಕೆ ನೀಡಿರುವ ಕುರಿತು ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ಘರ್ಷಣೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ರಾಜ್ಯದಲ್ಲಿ ಪ್ರಸ್ತುತ ಪರಿಸ್ಥಿತಿ ಶಾಂತಿಯುತವಾಗಿದ್ದು, ನಿಯಂತ್ರಣದಲ್ಲಿದೆ. ಪ್ರತಿಯೊಂದು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸೂಕ್ಷ್ಮ ಪ್ರದೇಶಗಳಿಗೆ ಪೊಲೀಸ್ ತುಕಡಿಗಳ ನಿಯೋಜನೆಗೆ ಸೂಚನೆ ನೀಡಲಾಗಿದೆ. ಈಗಾಗಲೇ ಕೆ.ಎಸ್.ಆರ್.ಪಿ ತುಕಡಿಗಳ ಚಲನೆ ಪ್ರಾರಂಭವಾಗಿದೆ. ಹುಬ್ಬಳ್ಳಿ ಪೊಲೀಸ್ ಆಯುಕ್ತರು ಮತ್ತು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿ ಸಲಹೆ ಸೂಚನೆಗಳನ್ನು ನೀಡಿದೆ ಎಂದರು.

*ಸೌಹಾರ್ದತೆ ಕಾಪಾಡಿ*
ಎಲ್ಲಾ ಸಮುದಾಯಗಳ ನಾಯಕರೊಂದಿಗೆ ಮಾತುಕತೆ ನಡೆಸಿ, ಸೌಹಾರ್ದತೆಯನ್ನು ಕಾಪಾಡುವಂತೆ ಪೊಲೀಸ್ ಇನ್ಸಪೆಕ್ಟರ್ ಗಳಿಗೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದರು.

Leave a Reply

Your email address will not be published. Required fields are marked *