March 28, 2024

Chitradurga hoysala

Kannada news portal

ಇಂದು ಅಧ್ಯಕ್ಷರ ಪದಗ್ರಹಣ ಸಮಾರಂಭ ಹಾಗೂ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ.

1 min read

ಬ್ಯಾಲಹಾಳ್ ಗ್ರಾಪಂ ಅಧ್ಯಕ್ಷರ ಪದಗ್ರಹಣ ಸಮಾರಂಭ –          ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ.

ಚಿತ್ರದುರ್ಗ ಹೊಯ್ಸಳ ನ್ಯೂಸ್/

ಚಿತ್ರದುರ್ಗ – ಭರಮಸಾಗರ:

ಚಿತ್ರದುರ್ಗ ತಾಲ್ಲೂಕು ಬ್ಯಾಲಹಾಳ್ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ, ಬೀಳ್ಕೊಡಿಗೆ, ಅಭಿನಂದನಾ ಕಾರ್ಯಕ್ರಮ ಹಾಗೂ ಭರಮಸಾಗರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮತ್ತು ಬೂತ್ ಸಮಿತಿ ರಚನಾ ಸಭೆಯನ್ನು ದಿನಾಂಕ 10-7-2022 ‌ಭಾನುವಾರ ಬೆಳಗ್ಗೆ 11 ಗಂಟೆಗೆ ಬ್ಯಾಲಹಾಳ್ ಗ್ರಾಮ ಪಂಚಾಯತಿ ಆವರಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಲಹಾಳ್ ಗ್ರಾಪಂ ಅಧ್ಯಕ್ಷೆ ಕೆ.ಎಂ. ಲಕ್ಷ್ಮಿದೇವಿ ಬೈಯಪ್ಪ ವಹಿಸಲಿದ್ದಾರೆ. ಇದೇ ವೇಳೆ ಮಾಜಿ ಸಚಿವ ಹಾಗು ಕೆಪಿಸಿಸಿ ಉಪಾಧ್ಯಕ್ಷ ಹೆಚ್.ಆಂಜನೇಯ ಅವರನ್ನು ಸನ್ಮಾನಿಸಲಾಗುವುದು.

ಕಾರ್ಯಕ್ರಮದಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮಾಜಿ ಸಂಸದ ಬಿ.ಎನ್‌. ಚಂದ್ರಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವೀಕ್ಷಕರಾದ ಡಾ.ಸಾಸಲು ಸತೀಶ್, ಜಗಳೂರು ಮಾಜಿ ಶಾಸಕ‌ ಹೆಚ್.ಪಿ. ರಾಜೇಶ್, ಕೆಪಿಸಿಸಿ ಪರಿಶಿಷ್ಟ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಪಾಲಯ್ಯ ಕೆ.ಪಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ ಪೀರ್, ಜಿಪಂ ಮಾಜಿ ಉಪಾಧ್ಯಕ್ಷ ಹೆಚ್.ಎನ್.ತಿಪ್ಪೇಸ್ವಾಮಿ (ಎಸ್ ಎಂಎಲ್)ಸದಸ್ಯರಾದ ಆರ್. ಕೃಷ್ಣಮೂರ್ತಿ, ಟಿಎಂಪಿ ತಿಪ್ಪೇಸ್ವಾಮಿ,ಆರ್.ನರಸಿಂಹರಾಜ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಂ.ತಿಪ್ಪೇಸ್ವಾಮಿ ಲಿಂಗವನಾಗ್ತಿಹಳ್ಳಿ,ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ನಾಗೇಂದ್ರಪ್ಪ ಚೌಲಿಹಳ್ಳಿ, ಚಿತ್ರದುರ್ಗ ಎಪಿಎಂಸಿ ಮಾಜಿ ಅಧ್ಯಕ್ಷ ಬಸ್ತಿಹಳ್ಳಿ ಸುರೇಶ್‌ ಬಾಬು, ಚಿತ್ರದುರ್ಗ ತಾಲೂಕು ಪಂಚಾಯತಿ ಮಾಜಿ ಸದಸ್ಯ ತಿಪ್ಪೇಸ್ವಾಮಿ ಕಲ್ಕುಂಟೆ, ಜಿಲ್ಲಾ ಕಾಂಗ್ರೆಸ್ ಎಸ್.ಟಿ.ಸಮಿತಿ ಅಧ್ಯಕ್ಷ ಹೆಚ್.ಅಂಜಿನಪ್ಪ, ಭರಮಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದುರುಗೇಶ್ ಪೂಜಾರಿ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮುಬಾರಕ್ ಅಲಿ ಭಾಗವಹಿಸಲಿದ್ದಾರೆ.

About The Author

Leave a Reply

Your email address will not be published. Required fields are marked *