March 28, 2024

Chitradurga hoysala

Kannada news portal

ಸರ್ಕಾರಿ ಕಚೇರಿಗಳಲ್ಲಿ ಫೋಟೋ ವಿಡಿಯೋ ಮಾಡದಂತೆ ಹೊರಡಿಸಿದ್ದ ಆದೇಶ ವಾಪಸ್ : ಸಿಎಂ ಬಸವರಾಜ ಬೊಮ್ಮಾಯಿ‌

1 min read

ಸರ್ಕಾರಿ ಕಚೇರಿಗಳಲ್ಲಿ ಫೋಟೋ ವಿಡಿಯೋ ಮಾಡದಂತೆ ಹೊರಡಿಸಿದ್ದ ಆದೇಶ ವಾಪಸ್ :
ಸಿಎಂ ಬಸವರಾಜ ಬೊಮ್ಮಾಯಿ‌
ಅವರ ಸೂಚನೆ ಹಿನ್ನೆಲೆಯಲ್ಲಿ      ಆದೇಶ ಹಿಂದಕ್ಕೆ

ಚಿತ್ರದುರ್ಗ ಹೊಯ್ಸಳ ನ್ಯೂಸ್/

ಬೆಂಗಳೂರು:

ರಾಜ್ಯ ಸರ್ಕಾರದ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ವೀಡಿಯೋ ಮಾಡಬಾರದು ಎಂಬ ಆದೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ವಾಪಸ್ ಪಡೆಯಲಾಗಿದೆ.

ಕರ್ನಾಟಕ ರಾಜ್ಯ ನೌಕರರ ಸಂಘ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ತೆಗೆಯಬಾರದು ಮತ್ತು ವಿಡಿಯೋ ಮಾಡದಂತೆ ನಿಷೇಧಿಸಿ ಆದೇಶವನ್ನು ಹೊರಡಿಸಲಾಗಿತ್ತು.

ಈ ಆದೇಶವನ್ನು ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಮಧ್ಯರಾತ್ರಿಯೇ ಆದೇಶವನ್ನು ಹಿಂಪಡೆಯಲಾಗಿದೆ.

About The Author

Leave a Reply

Your email address will not be published. Required fields are marked *