ಭರಮಸಾಗರ ಕಾಂಗ್ರೆಸ್ ಕಾರ್ಯಕರ್ತರ ಸಭೆಗೆ ಬನ್ನಿ : ಎಂ.ದುರ್ಗೇಶ್ ಪೂಜಾರ್ ಅಧ್ಯಕ್ಷ ಬ್ಲಾಕ್ ಕಾಂಗ್ರೆಸ್ ಸಮಿತಿ
1 min read
ಭರಮಸಾಗರ ಕಾಂಗ್ರೆಸ್ ಕಾರ್ಯಕರ್ತರ ಸಭೆಗೆ ಬನ್ನಿ
ಚಿತ್ರದುರ್ಗ:
ಸ್ವಾತಂತ್ರ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಕಾಂಗ್ರೆಸ್ ಪಕ್ಷದಿಂದ ವಿಶೇಷ ಕಾರ್ಯಕ್ರಮಗಳ ಆಯೋಜನೆ ಕುರಿತು ಚರ್ಚೆ ನಡೆಸಲು. ಭರಮಸಾಗರ ಹೆಗ್ಗೆರೆ ರಸ್ತೆ ನಿರಂಜನ್ ಕಲ್ಯಾಣ ಮಂಟಪದಲ್ಲಿ ಜುಲೈ 28 ಗುರುವಾರ ಬೆಳಗ್ಗೆ 10.30ಕ್ಕೆ ಸಭೆ ಕರೆಯಲಾಗಿದೆ.
ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷರಾದ. ಎಚ್.ಆಂಜನೇಯ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಪಕ್ಷದ ಸಂಘಟನೆ ಕುರಿತು ಚರ್ಚಿಸಲಾಗುವುದು
ಆಗಸ್ಟ್ 3 ದಾವಣಗೆರೆಯಲ್ಲಿ ಸಿದ್ದರಾಮಯ್ಯ 75 ಅಮೃತ ಮಹೋತ್ಸವ ಕಾರ್ಯಕ್ರಮದ ಸಿದ್ಧತೆ ಕುರಿತು ಚರ್ಚೆ ನಡೆಸಲಾಗುವುದು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಕ್ಷೇತ್ರದ ಉಸ್ತುವಾರಿ .ಡಾ.ಸಾಸಲು ಸತೀಶ್, ಕೆಪಿಸಿಸಿ ಉಪಾಧ್ಯಕ್ಷ ಮಾಜಿ ಸಂಸದ ಶ್ರೀ ಬಿ.ಎನ್.ಚಂದ್ರಪ್ಪ,ಕೊ ಅರ್ಡಿನೆಟರ್ ಜಯಣ್ಣ, ಪಕ್ಷದ ಜಿಲ್ಲಾಧ್ಯಕ್ಷ ಶ್ರೀ.ಎಂ.ಕೆ.ತಾಜ್‌ಪೀರ್, ಕಾರ್ಯಾಧ್ಯಕ್ಷ ಶ್ರೀ.ಕೆಎಂ.ಹಾಲಸ್ವಾಮಿ ಸೇರಿದಂತೆ ಮಾಜಿ ಜಿ.ಪಂ,ತಾ.ಪಂ ಸದಸ್ಯರುಗಳು ಹಾಗೂ ಪಕ್ಷದ ವಿವಿಧ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಹಿರಿಯ ಮುಖಂಡರು ಪಾಲ್ಗೊಳ್ಳಲಿದ್ದಾರೆ.
ವಿಶೇಷ ಕಾರ್ಯಕ್ರಮಗಳ ಆಯೋಜನೆ ಪೂರ್ವಭಾವಿ ಸಿದ್ಧತಾ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಮುಖಂಡರು ಪಾಲ್ಗೊಂಡು, ಸಲಹೆ ಸೂಚನೆ ನೀಡಬೇಕೆಂದು ವಿನಂತಿ,
ಎಂ.ದುರ್ಗೇಶ್ ಪೂಜಾರ್ ಅಧ್ಯಕ್ಷ
ಬ್ಲಾಕ್ ಕಾಂಗ್ರೆಸ್ ಸಮಿತಿ ಭರಮಸಾಗರ