February 26, 2024

Chitradurga hoysala

Kannada news portal

ಗ್ರಾಮ ಪಂಚಾಯತಿ ಅಭಿವೃದ್ಧಿಗೆ ಅಧಿಕಾರಿಗಳು ಒತ್ತು ನೀಡಬೇಕು: ಶಾಸಕಿ ಪೂರ್ಣಿಮಾ ಶ್ರೀನಿವಾಸ್

1 min read

ಹಿರಿಯೂರು: ತಾಲ್ಲೂಕಿನ ಯರಬಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಕೆ.ಪೂರ್ಣಿಮಾ ಶ್ರೀನಿವಾಸ ರವರ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಂಚಾಯಿತಿಯಲ್ಲಿ ಕಳೆದ 5 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಆಗದೆ ಇರುವುದರಿಂದ ಇಂತಹ ಪಂಚಾಯಿತಿಗಳಿಗೆ ಅಧಿಕಾರಿಗಳು ಹೆಚ್ಚು ಒತ್ತು ಕೊಟ್ಟು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಬೇಕೆಂದು ಸೂಚಿಸಿದರು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವ ಮೂಲಕ ಸಾರ್ವಜನಿಕರಿಗೆ ಸ್ಪಂದಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಸತ್ಯನಾರಾಯಣ, ಇಓ ಹನುಮಂತರಾಯಪ್ಪ, ಸಿಪಿಒ ರಾಘವೇಂದ್ರ, ಪಿಡಿಒ ಬಸವರಾಜ, ಬೆಸ್ಕಾಂ ಎಸ್.ಒ ಪರುಶುರಾಮ, ಡಿಸಿಸಿ ಬ್ಯಾಂಕ್ ನಿರ್ದೇಶಕ ದ್ಯಾಮೆಗೌಡ, ಗೋಪಾಲ, ಟಿ.ನಾಗಪ್ಪ, ಶಿವಣ್ಣ, ತಿಪ್ಪೇಸ್ವಾಮಿ, ಮಂಜುನಾಥ ಮುಂತಾದವರ ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *