May 3, 2024

Chitradurga hoysala

Kannada news portal

90 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ದ : ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ

1 min read


90 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ದ : 8 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ಚಿತ್ರದುರ್ಗ:

ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ನಾಮಪತ್ರ ಪರಿಶೀಲನೆ ಕಾರ್ಯ ಶುಕ್ರವಾರ ಜರುಗಿತು. ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 98 ಅಭ್ಯರ್ಥಿಗಳು ಉಮೇದುವಾರಿಕೆ ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ 8 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡಿವೆ.
ಮೊಳಕಾಲ್ಮೂರು ಕ್ಷೇತ್ರದಲ್ಲಿ 12,
ಹೊಸದುರ್ಗ ಕ್ಷೇತ್ರದಲ್ಲಿ 15 ಹಾಗೂ
ಹೊಳಲ್ಕೆರೆ ಕ್ಷೇತ್ರದಲ್ಲಿ 19 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಎಲ್ಲಾ ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ದಗೊಂಡಿವೆ.
ಚಳ್ಳಕೆರೆ ಕ್ಷೇತ್ರದಲ್ಲಿ 8 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಒಬ್ಬ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ.
ಚಿತ್ರದುರ್ಗ ಕ್ಷೇತ್ರದಲ್ಲಿ 29 ಅಭ್ಯರ್ಥಿಗಳು ನಾಮಪತ್ರ ಸಲ್ಲಿದ್ದು, ಇದರಲ್ಲಿ 6 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡಿವೆ. ಹಿರಿಯೂರು ಕ್ಷೇತ್ರದಲ್ಲಿ 15 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಒಬ್ಬ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಮಾಹಿತಿ ನೀಡಿದ್ದಾರೆ.

About The Author

Leave a Reply

Your email address will not be published. Required fields are marked *