90 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ದ : ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ
1 min read90 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ದ
8 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಏ.21:
ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ನಾಮಪತ್ರ ಪರಿಶೀಲನೆ ಕಾರ್ಯ ಶುಕ್ರವಾರ ಜರುಗಿತು. ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 98 ಅಭ್ಯರ್ಥಿಗಳು ಉಮೇದುವಾರಿಕೆ ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ 8 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡಿವೆ.
ಮೊಳಕಾಲ್ಮೂರು ಕ್ಷೇತ್ರದಲ್ಲಿ 12, ಹೊಸದುರ್ಗ ಕ್ಷೇತ್ರದಲ್ಲಿ 15 ಹಾಗೂ ಹೊಳಲ್ಕೆರೆ ಕ್ಷೇತ್ರದಲ್ಲಿ 19 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಎಲ್ಲಾ ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ದಗೊಂಡಿವೆ. ಚಳ್ಳಕೆರೆ ಕ್ಷೇತ್ರದಲ್ಲಿ 8 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಒಬ್ಬ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ. ಚಿತ್ರದುರ್ಗ ಕ್ಷೇತ್ರದಲ್ಲಿ 29 ಅಭ್ಯರ್ಥಿಗಳು ನಾಮಪತ್ರ ಸಲ್ಲಿದ್ದು, ಇದರಲ್ಲಿ 6 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡಿವೆ. ಹಿರಿಯೂರು ಕ್ಷೇತ್ರದಲ್ಲಿ 15 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಒಬ್ಬ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಮಾಹಿತಿ ನೀಡಿದ್ದಾರೆ.