ಹೊಳಲ್ಕೆರೆ ಪಟ್ಟಣದಲ್ಲಿ ಮತದಾರರ ಜಾಗೃತಿ ಹಾಗೂ ಭೂ ದಿನಾಚರಣೆ
1 min readಹೊಳಲ್ಕೆರೆ ಪಟ್ಟಣದಲ್ಲಿ ಮತದಾರರ ಜಾಗೃತಿ ಹಾಗೂ ಭೂ ದಿನಾಚರಣೆ
ಹೊಳಲ್ಕೆರೆ:
ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಹೊಳಲ್ಕೆರೆ ತಾಲ್ಲೂಕು ಆಡಳಿತ ಮತ್ತು ಹೊಳಲ್ಕೆರೆ ಪುರಸಭೆ ವತಿಯಿಂದ ಮತದಾರರ ಜಾಗೃತಿ ಕಾರ್ಯಕ್ರಮ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ, ಹೊಳಲ್ಕೆರೆ ವತಿಯಿಂದ ಭೂ ದಿನಾಚರಣೆ ಕಾರ್ಯಕ್ರಮವನ್ನು ಹೊಳಲ್ಕೆರೆ ಪಟ್ಟಣದ ಶ್ರೀ ಸದ್ಗುರು ಸೇವಾಶ್ರಮದಲ್ಲಿ ಮತ್ತು ಹಮ್ಮಿಕೊಳ್ಳಲಾಗಿತ್ತು.
ಪ್ರತಿಯೊಬ್ಬ ನಾಗರಿಕರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಹಾಗೂ ತಮ್ಮ ಮತದಾನದ ಹಕ್ಕನ್ನು ಭಾರತೀಯ ಪ್ರಜೆಗಳು ತಪ್ಪದೇ ಚಲಾಯಿಸುವಂತೆ ಈ ಸಂದರ್ಭದಲ್ಲಿ ಮನವಿ ಮಾಡಿಕೊಳ್ಳಲಾಯಿತು. ದೇಶದ ಮುನ್ನಡೆಗೆ ವಿವೇಚನಾತ್ಮಕವಾಗಿ ಮತ ಚಲಾವಣೆಯನ್ನು ಸ್ವಯಂ ಪ್ರೇರಣೆಯಿಂದ ಮಾಡಲು ಸಂವಿಧಾನ ನೀಡಿರುವ ಅವಕಾಶವನ್ನು ಸದ್ವಿನಿಯೋಗ ಮಾಡಿಕೊಳ್ಳುವಂತೆ ಪುರಸಭೆ ಮುಖ್ಯಾಧಿಕಾರಿ ಎ ವಾಸಿಂ ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಮತದಾನದ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕರಾದ ಪೂಜಾರಿಯವರು ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಮಹಿಳಾ ಸದಸ್ಯರುಗಳು ಮತ್ತು ಹೊಳಲ್ಕೆರೆ ಪುರಸಭೆಯ ನೌಕರರಾದ ಮಹಮದ್ ಶೌಕತ್ ಅಲಿ, ಪ್ರಶಾಂತ್, ದೇವರಾಜ್ ಸಹ ಇದ್ದರು.