April 26, 2024

Chitradurga hoysala

Kannada news portal

ಯಶಸ್ಸು ಪಡೆಯಲು ನಿರಂತರ ಪರಿಶ್ರಮ ಮತ್ತು ಪ್ರಾಮಾಣಿಕತೆ ಅಗತ್ಯ ಡಾ:ಲೇಪಾಕ್ಷ

1 min read

ಯಶಸ್ಸು ಪಡೆಯಲು ನಿರಂತರ ಪರಿಶ್ರಮ ಮತ್ತು ಪ್ರಾಮಾಣಿಕತೆ ಅಗತ್ಯ ಡಾ:ಲೇಪಾಕ್ಷ.

ಚಿತ್ರದುರ್ಗ ಹೊಯ್ಸಳ ನ್ಯೂ ಸ್/ ಚಿತ್ರದುರ್ಗ:

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್. ಚಿತ್ರದುರ್ಗ ಇವರ ವತಿಯಿಂದ 30 ದಿನಗಳ ಉಚಿತ ಸಿಇಟಿ ಮತ್ತು ನೀಟ್ ಪರೀಕ್ಷೆಗಳ ತರಬೇತಿ ಕಾರ್ಯಕ್ರಮದ ಸಮರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಸರ್ಕಾರಿ ಕಲಾಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಪ್ರಾದ್ಯಪಕರಾದ ಡಾ: ಲೇಪಾಕ್ಷ ರವರು ಮುಂಬರುವ ಸಿಇಟಿ ಮತ್ತು ನೀಟ್ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನ ಪಡೆಯುವುದರೊಂದಿಗೆ ಉತ್ತಮ ಕಾಲೇಜುನಲ್ಲಿ ಉನ್ನತ ವ್ಯಾಸಂಗವನ್ನು ಪಡೆದು ಸದೃಢವಾದ ಸಮಾಜವನ್ನು ನಿರ್ಮಿಸುವ ಕಾರ್ಯ ನಿಮ್ಮಿಂದಾಗಲಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸಮಾರಂಭದ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಸ್ ಎಲ್ ವಿ ಪಿಯು ಕಾಲೇಜಿನ ರಸಾಯನಶಾಸ್ತ್ರ ವಿಷಯದ ಮುಖ್ಯಸ್ಥರಾದ ಹರ್ಷ ಯು ರವರು ಮಾತನಾಡುತ್ತಾ ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಅತ್ಯಂತ ಪ್ರಮುಖವಾದ ಘಟ್ಟ.ಚಿಕ್ಕ ವಯಸ್ಸಿನಿಂದಲೂ ಕಂಡಂತಹ ಕನಸುಗಳನ್ನ ನನಸು ಮಾಡಿಕೊಳ್ಳಲು ಎದುರಿಸುತ್ತಿರುವ ಸಿಇಟಿ ಪರೀಕ್ಷೆಗಳಲ್ಲಿ ಯಶಸ್ಸು ಸಿಗಲಿ ಎಂದು ಶುಭ ಹಾರೈಸಿ ಯಾವುದೇ ಕಾರ್ಯಗಳಲ್ಲಿ ಯಶಸ್ಸು ಪಡೆಯಲು ನಿರಂತರ ಪರಿಶ್ರಮ ಮತ್ತು ಪ್ರಾಮಾಣಿಕತೆ ಅತ್ಯಗತ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿಭಾಗ ಸಂಚಾಲಕರಾದ ಆದರ್ಶ ಸಿಇಟಿ ಸಂಚಾಲಕರಾದ ಭರತ್ ಭಾರ್ಗವ್ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ಸಿದ್ದೇಶ್ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *