April 20, 2024

Chitradurga hoysala

Kannada news portal

ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ತೀರ್ಮಾನ ಆಗಿಲ್ಲ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ

1 min read

ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ತೀರ್ಮಾನ ಆಗಿಲ್ಲ :
ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ.

ನವದೆಹಲಿ:
ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ತೀರ್ಮಾನ ಆಗಿಲ್ಲ ಎಂದು ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ಬುಧವಾರ ಮಧ್ಯಾಹ್ನ ತಿಳಿಸಿದರು.
ಇದರೊಂದಿಗೆ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಮುಂದುವರಿದಂತಾಗಿದೆ. ಹೈಕಮಾಂಡ್ ಜತೆ ಹಲವು ಸುತ್ತಿನ ಸಭೆಗಳ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಬಳಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸುರ್ಜೇವಾಲ, ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂಬ ವದಂತಿಗಳು ಹರಡಿದ್ದು, ರಾಜ್ಯದ ಹಲವೆಡೆ ಸಿದ್ದರಾಮಯ್ಯ ಬೆಂಬಲಿಗರು ಸಂಭ್ರಮವನ್ನೂ ವ್ಯಕ್ತಪಡಿಸಿದ್ದರು. ಹಲವೆಡೆ ಸಂಭ್ರಮಾಚರಣೆ ಆರಂಭವಾಗಿತ್ತು. ಇದರ ಬೆನ್ನಲ್ಲೇ ಸುರ್ಜೇವಾಲ ಅವರು ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.

About The Author

Leave a Reply

Your email address will not be published. Required fields are marked *