ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್:ಕೆ.ಸಿ ವೇಣು ಗೋಪಾಲ್,
1 min readಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್: ಕೆ.ಸಿ ವೇಣು ಗೋಪಾಲ್.
ನವದೆಹಲಿ:
ಕರ್ನಾಟಕ ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸಿದ್ದರಾಮಯ್ಯ ಮತ್ತು ಒಬ್ಬರೆ ಉಪ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಗುರುವಾರ ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆ.ಸಿ ವೇಣು ಗೋಪಾಲ್, ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ತಿಳಿಸಿದ್ದಾರೆ.