April 24, 2024

Chitradurga hoysala

Kannada news portal

ನಾಳೆ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಯಾರಿಗೆಲ್ಲ ಆಹ್ವಾನ…?

1 min read


ನಾಳೆ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಯಾರಿಗೆಲ್ಲ ಆಹ್ವಾನ..?

ಬೆಂಗಳೂರು:

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದತೆ ಕೈಗೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಜನರು ಆಗಮಿಸುವ ಹಿನ್ನೆಲೆಯಲ್ಲಿ ಅದಕ್ಕೆ ತಕ್ಕಂತೆ ಸಿದ್ಧತೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕ್ರೀಡಾಂಗಣದಲ್ಲಿ ಸುಮಾರು ೪೦ ಸಾವಿರ ಸೀಟುಗಳ ವ್ಯವಸ್ಥೆ ಇದ್ದು, ಇದರಲ್ಲಿ ಗಣ್ಯರು, ಜನಪ್ರತಿನಿಧಿಗಳು ಹಾಗೂ ಆಹ್ವಾನಿತರಿಗೆ ಅವಕಾಶ ನೀಡಿ,ಉಳಿದ ಜಾಗದಲ್ಲಿ ಸಾರ್ವಜನಿಕರು ಕೂರಲು ವ್ಯವಸ್ಥೆ ಮಾಡಲಾಗುತ್ತದೆ. ಕಾರ್ಯಕ್ರಮಕ್ಕೆ ಒಂದು ಲಕ್ಷ ಜನರು ಆಗಮಿಸುವ ಸಾಧ್ಯತೆ ಇದ್ದು, ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಮಾರಂಭಕ್ಕೆ  ಆಹ್ವಾನ…?

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸಗಢದ ಮುಖ್ಯಮಂತ್ರಿ ಭೂಪೇಶ್ ಬಗೇಲ್, ಬಿಹಾರ್‌ ಸಿಎಂ ನಿತೀಶ್ ಕುಮಾರ್, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್.ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್‌ ಸುಖು, ಪುದಿಚೆರಿ ಸಿಎಂ ಎನ್.ರಂಗಸ್ವಾಮಿ, ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೆನ್‌ ಅವರನ್ನು ಆಹ್ವಾನಿಸಲಾಗಿದೆ.

About The Author

Leave a Reply

Your email address will not be published. Required fields are marked *