May 19, 2024

Chitradurga hoysala

Kannada news portal

ಕಾನೂನು ಸೇವಾ ಪ್ರಾಧಿಕಾರದಿಂದ ಸಂಭಾವನೆ ರಹಿತ ಅರೆ ಕಾಲಿಕ ಸ್ವಯಂ ಸೇವಕರುಗಳ ನೇಮಕಾತಿಗೆ ಅರ್ಜಿ ಆಹ್ವಾನ

1 min read

ಚಿತ್ರದುರ್ಗ,ಆ.10:  ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಯೋಜನೆ, ಕಾರ್ಯಕ್ರಮಗಳು ಹಾಗೂ ಇತರೆ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅರೆ ಕಾಲಿಕ ಸ್ವಯಂ ಸೇವಕರುಗಳ (para legal Volunteers)  ನೇಮಕಾತಿಗೆ ಆಹ್ವಾನಿಸಲಾಗಿದೆ.  ಸ್ವಯಂ ಸೇವಕರು ಸಾಮಾಜಿಕ ಚಿಂತನೆ ಹಾಗೂ ಸಮಾಜ ಸೇವೆ ಮಾಡಬೇಕು ಎಂಬ ಇಚ್ಛೆಯುಳ್ಳ ವಿದ್ಯಾವಂತ ಯುವಕರು ಹಾಗೂ ಯುವತಿಯರು, ರಾಜಕೀಯೇತರ ಸೇವಾ ಮನೋಭಾವವುಳ್ಳವರು, ಸರ್ಕಾರೇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ನಿವೃತ್ತ ಶಿಕ್ಷಕರುಗಳು, ಸರ್ಕಾರಿ ನೌಕರರುಗಳು, ಅಂಗನವಾಡಿ ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಹಾಗೂ ಕಾನೂನು ವಿದ್ಯಾರ್ಥಿಗಳು, ಅರ್ಜಿಯನ್ನು ಸಲ್ಲಿಸಬಹುದು. ಆದರೆ ಯಾವುದೇ ಸಂಭಾವನೆ ಇರುವುದಿಲ್ಲ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕ್ರಮ ಹಾಗೂ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸಿದ ಅರೆ ಕಾಲಿಕ ಸ್ವಯಂ ಸೇವಕರುಗಳಿಗೆ ಗೌರವಧನವನ್ನು ನೀಡಲಾಗುವುದು. ಅರ್ಜಿಯನ್ನು ಸಲ್ಲಿಸುವ ಇಚ್ಛೆಯುಳ್ಳವವರು ಸ್ವ ವಿವರದ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಗಿರೀಶ ಬಿ.ಕೆ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *