ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ.
1 min readನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ
ನವದೆಹಲಿ :
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ 08 ಮಂದಿ ಶಾಸಕರು ಸಚಿವರಾಗಿ ಇಂದು ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನವದೆಹಲಿಯಲ್ಲಿ ಮಧ್ಯರಾತ್ರಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಸಂಭಾವ್ಯ ಸಚಿವರ ಪಟ್ಟಿಯೊಂದಿಗೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರೊಂದಿಗೆ ಸುಮಾರು 5 ಗಂಟೆಗಳ ಚರ್ಚೆ ನಡೆಸಿ ಸಿಎಂ ಡಿಸಿಎಂ ಸೇರಿ 10 ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ,ಎನ್ನಲಾಗಿದೆ.
ನೂತನ ಸಚಿವರ ಪಟ್ಟಿ ನೋಡಿ
ಸಿದ್ದರಾಮಯ್ಯ, ಮುಖ್ಯ ಮಂತ್ರಿ
ಡಿ.ಕೆ.ಶಿವಕುಮಾರ್, ಡಿಸಿಎಂ
ಡಾ.ಜಿ.ಪರಮೇಶ್ವರ್
ಕೆ.ಹೆಚ್. ಮುನಿಯಪ್ಪ
ಕೆ.ಜೆ. ಜಾರ್ಜ್
ಎಂ.ಬಿ.ಪಾಟೀಲ್
ಸತೀಶ್ ಜಾರಕಿಹೊಳಿ
ಪ್ರಿಯಾಂಕ್ ಖರ್ಗೆ
ರಾಮಲಿಂಗ ರೆಡ್ಡಿ
ಜಮೀರ್ ಅಹ್ಮದ್