April 20, 2024

Chitradurga hoysala

Kannada news portal

ಗೃಹಲಕ್ಷ್ಮಿ ಯೋಜನೆ ನಾಳೆ ಇಂದ ನೋಂದಣಿ ಪ್ರಾರಂಭ: ಜಿಲ್ಲಾಧಿಕಾರಿ ದಿವ್ಯ ಪ್ರಭು

1 min read

ಗೃಹಲಕ್ಷ್ಮಿ ಯೋಜನೆ ನಾಳೆ ಇಂದ ನೋಂದಣಿ ಪ್ರಾರಂಭ: ಜಿಲ್ಲಾಧಿಕಾರಿ ದಿವ್ಯ ಪ್ರಭು.

CHITRADURGAHOYSALA NEWS:

ಚಿತ್ರದುರ್ಗ:

1} ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಯ ದಿನಾಂಕ:19-07-2023 ರಿಂದ ಆರಂಭಿಸಲಾಗುವುದು.
2} ಈಗಾಗಲೇ ತಿಳಿಸಿರುವಂತೆ ಪಡಿತರ ಚೀಟಿಯಲ್ಲಿ “ಯಜಮಾನಿ ಮಹಿಳೆ” ಎಂದು ಗುರುತಿಸಿರುವ ಮಹಿಳೆಯು ಈ ಯೋಜನೆಯ ಫಲಾನುಭವಿಯಾಗುತ್ತಾರೆ. ಆದರೆ ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ. ಪಾವತಿದಾರರಾಗಿರತಕ್ಕದ್ದಲ್ಲ.
3} ಫಲಾನುಭವಿಯು ನೋಂದಣಿಯನ್ನು 2 ವಿಧಾನದಿಂದ ಮಾಡಿಸಬಹುದಾಗಿದೆ.
(೧) ಮೊದಲನೆಯದಾಗಿ ಈಗಾಗಲೇ ರೇಷನ್ ಕಾರ್ಡಿನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಹಾಗೂ ನೊಂದಾವಣಿ ಮಾಡಿಸುವ ಸ್ಥಳದ ವಿವರಗಳನ್ನು SMS ಮೂಲಕ ತಿಳಿಸಲಾಗುವುದು.

ಗ್ರಾಮಾಂತರ ಪ್ರದೇಶದಲ್ಲಿ ಅವರು ವಾಸಿಸುವ ಗ್ರಾಮದ ಸಮೀಪವಿರುವ ಗ್ರಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರವಾಗಿರುತ್ತದೆ. ಹಾಗೆಯೇ ನಗರ ಪ್ರದೇಶದಲ್ಲಿ ಅವರ ಸಮೀಪವಿರುವ ಕರ್ನಾಟಕ-ಒನ್ ಬೆಂಗಳೂರು-ಒನ್, ಬಿಬಿಎಂಪಿ ವಾರ್ಡ್ ಕಛೇರಿ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಕಛೇರಿಗಳು ಕೇಂದ್ರವಾಗಿರುತ್ತದೆ.

(೨) ಪರ್ಯಾಯವಾಗಿ “ಪುಜಾಪ್ರತಿನಿಧಿ” (ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂಸೇವಕರು) ತಮ್ಮ ಮನೆಗೆ ಭೇಟಿ ನೀಡಿದಾಗ ಅವರಿಂದಲೂ ಸಹ ನೊಂದಾಯಿಸಿ ಕೊಳ್ಳಬಹುದು. 4} ಪ್ರತಿ ಫಲಾನುಭವಿಯ ನೊಂದಾವಣಿಗೆ ನಿಗದಿಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902 ಗೆ ಕಾಲ್ ಮಾಡಿ ಅಥವಾ 8147500500 ನಂಬರ್‌ಗೆ SMS ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ.

5} ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ- ಒನ್/ಬಾಪೂಜಿಕೇಂದ್ರ/ಕರ್ನಾಟಕ-ಒನ್/ಬೆಂಗಳೂರು-ಒನ್ ಕೇಂದ್ರಗಳಿಗೆ ಹೋಗಲು ಸಾಧ್ಯವಾಗದೇ ಇದ್ದಲ್ಲಿ ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 ರಿಂದ 7 ಗಂಟೆಯೊಳಗೆ ಭೇಟಿ ನೀಡಿ ನೊಂದಾಯಿಸಿಕೊಳ್ಳಬಹುದಾಗಿದೆ.

6} ‌ ಯೋಜನೆಯಡಿ ನೊಂದಾಯಿಸಿಕೊಳ್ಳಲು ಪಡಿತರ ಚೀಟಿ ಸಂಖ್ಯೆ ಆಧಾರ್ ಕಾರ್ಡ್ ಸಂಖ್ಯೆ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಬ್ಯಾಂಕ್‌ ಖಾತೆಯ ಪಾಸ್ ಬುಕ್(ಆಧಾರ್ ನಂಬರ್ ಜೋಡಣೆಯಾಗಿರುವ ಬ್ಯಾಂಕ್‌ ಖಾತೆ ಹೊರತುಪಡಿಸಿ ಪರ್ಯಾಯ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಸದರಿ ಬ್ಯಾಂಕ್ ಖಾತೆಯ ಪಾಸ್ ಬುಕ್) ಮಾಹಿತಿ ಅಗತ್ಯವಿರುತ್ತದೆ. ನೊಂದಣಿಗೆ ನಿಗದಿಪಡಿಸಿದ ದಿನಾಂಕದಂದು ಈ ಎಲ್ಲಾ ಹಾಜರಾಗುವುದು. ಮಾಹಿತಿಗಳೊಂದಿಗೆ ಫಲಾನುಭವಿಗಳು ಕೇಂದ್ರಕ್ಕೆ ಹಾಜರಾಗುವುದು.

7} ‌ ಗ್ರಾಮ್-ಒನ್ / ಬಾಪೂಜಿಕೇಂದ್ರ / ಕರ್ನಾಟಕ-ಒನ್ / ಬೆಂಗಳೂರುಒನ್ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡಾಗ ಮಂಜೂರಾತಿ ಪತ್ರವನ್ನು ನೀಡಲಾಗುವುದು.

8 } ಪ್ರಜಾಪ್ರತಿನಿಧಿ ಮೂಲಕ ನೊಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರವನ್ನು ತದನಂತರ ತಮ್ಮ ಮನೆಗೆ ತಲುಪಿಸಲಾಗುವುದು.

9} ಮೇಲಿನಂತೆ ಪುಜಾಪ್ರತಿನಿಧಿ ಮೂಲಕ ಅಥವಾ ಗ್ರಾಮ್-ಒನ್/ ಬಾಪೂಜಿಕೇಂದ್ರ/ ಕರ್ನಾಟಕ-ಒನ್ / ಬೆಂಗಳೂರುಒನ್ ಕೇಂದ್ರಗಳಲ್ಲಿ
ನೊಂದಾಯಿಸಿಕೊಂಡಲ್ಲಿ, ಅರ್ಜಿದಾರರು ನೀಡಿದ ಮೊಬೈಲ್ ಸಂಖ್ಯೆಗೆ SMS ಮೂಲಕ ಮಂಜೂರಾತಿ ಬಗ್ಗೆ ಸಂದೇಶ ರವಾನಿಸಲಾಗುವುದು.

10} ಒಂದು ವೇಳೆ ಫಲಾನುಭವಿಯು ಗ್ರಾಮ್-ಒನ್ / ಬಾಪೂಜಿಕೇಂದ್ರ / ಕರ್ನಾಟಕ-ಒನ್ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡಿದಲ್ಲಿ, ಆನಂತರ ಪ್ರಜಾಪ್ರತಿನಿಧಿ ಅವರ ಮನೆಗೆ ಭೇಟಿ ನೀಡಿ ನೊಂದಾಯಿಸಲು ಪುಯತ್ನಿಸಿದರೆ ಈಗಾಗಲೇ ನೊಂದಾಯಿಸಿರುವ ಮಾಹಿತಿ ವ್ಯಕ್ತವಾಗುತ್ತದೆ.
11} ಈಗಾಗಲೇ ಆಧಾರ್ ಜೋಡಣೆಯಾಗಿರುವ ಫಲಾನುಭವಿಯ ಖಾತೆಗೆ ಮಾಹೆಯಾನ ರೂ.2000/-ಗಳನ್ನು ಡಿ.ಬಿ.ಟಿ. ಮೂಲಕ ಜಮೆ ಮಾಡಲಾಗುವುದು. ಒಂದು ವೇಳೆ ಫಲಾನುಭವಿಗಳು ಇಚ್ಚಿಸಿದಲ್ಲಿ ಪರ್ಯಾಯ ಬ್ಯಾಂಕ್ ಖಾತೆಯನ್ನು ನೀಡಬಹುದಾಗಿರುತ್ತದೆ. ಸದರಿ ಬ್ಯಾಂಕ್‌ ಖಾತೆಗೆ ಮಾಹೆಯಾನ ರೂ.2000/-ಗಳನ್ನು ಆರ್.ಟಿ.ಜಿ.ಎಸ್. ಮೂಲಕ ಜಮೆ ಮಾಡಲಾಗುವುದು.
12} ಈ ಯೋಜನೆಯಡಿ ಫಲಾನುಭವಿಯು ಯಾವುದೇ ಶುಲ್ಕವನ್ನು ಪಾವತಿಸತಕ್ಕದ್ದಲ್ಲ.
13} ಈ ಯೋಜನೆಯಡಿ ನೊಂದಾಯಿಸಿಕೊಳ್ಳುವ
ಪ್ರಕ್ರಿಯೆ ಉಚಿತವಾಗಿರುತ್ತದೆ.
14} ಈ ಯೋಜನೆಯಡಿ ಯಾವುದೇ ಅಂತಿಮ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿರುವುದಿಲ್ಲ. ಆದ್ದರಿಂದ ಒಂದು ವೇಳೆ ನಿಗದಿತ ದಿನಾಂಕ / ಸಮಯಕ್ಕೆ ನೊಂದಾಯಿಸಿಕೊಳ್ಳಲು ಸಾಧ್ಯವಾಗದೇ ಇದ್ದಲ್ಲಿ ಮುಂದೆ ಯಾವುದೇ ದಿನಾಂಕ / ಸಮಯದಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ‌ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

About The Author

Leave a Reply

Your email address will not be published. Required fields are marked *