May 18, 2024

Chitradurga hoysala

Kannada news portal

ನಿರಂತರ ಮಳೆ,ಜುಲೈ.26-27ರಂದು ಶಾಲೆಗಳಿಗೆ ರಜೆ ಘೋಷಣೆ: ಕಾಲೇಜುಗಳಿಗೆ ರಜೆ ಇಲ್ಲ:ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ

1 min read

ನಿರಂತರ ಮಳೆ,

ಜುಲೈ.26-27ರಂದು ಶಾಲೆಗಳಿಗೆ ರಜೆ ಘೋಷಣೆ:

ಕಾಲೇಜುಗಳಿಗೆ ರಜೆ ಇಲ್ಲ:

ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ

ಚಿತ್ರದುರ್ಗ ಹೊಯ್ಸಳ ಸುದ್ದಿ:

ಚಿತ್ರದುರ್ಗ:
ಜಿಲ್ಲಾ ವ್ಯಾಪ್ತಿಯಲ್ಲಿ ನಿರಂತರವಾಗಿ ಅತಿಯಾದ ಮಳೆಯಾಗುತ್ತಿರುವುದರಿಂದ ಅಂಗನವಾಡಿ ಕೇಂದ್ರಗಳು, ಎಲ್ಲಾ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ಜುಲೈ 26- 2023 ಮತ್ತು 27-2023 ರಂದು ಎರಡು ದಿನಗಳು ಶಾಲೆ ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಜೆ.ಆರ್.ಜೆ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ನಿರಂತರವಾಗಿ ಬಿಡದೇ ಮಳೆ ಸುರಿಯುತ್ತಿರುವುದರಿಂದ ವಿಧ್ಯಾರ್ಥಿಗಳು ಶಾಲೆಗೆ ಬರಲು ತೊಂದರೆಯಾಗುತ್ತಿದ್ದು, ಚಿತ್ರದುರ್ಗ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಅಂಗನವಾಡಿ ಕೇಂದ್ರಗಳ ಮಕ್ಕಳ ಹಿತದೃಷ್ಟಿಯಿಂದ ರಜೆ ಘೋಷಿಸಲಾಗಿದ್ದು, ಪ್ರಸ್ತುತ ನೀಡಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರೆ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಿಕೊಂಡು ನಿರ್ವಹಿಸಬೇಕೆಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಕಾಲೇಜುಗಳಿಗೆ ರಜೆ ಇಲ್ಲ

ಪದವಿ ಸ್ನಾತಕೋತ್ತರ ಪದವಿ, ಡಿಪ್ಲೊಮಾ ಎಂಜಿನಿಯರಿಂಗ್ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿರುವುದಿಲ್ಲ ಹಾಗೂ ಎಂದಿನಂತೆ ತರಗತಿಗಳು ನಡೆಯುತ್ತವೆ ಎಂದು ಜಿಲ್ಲಾಧಿಕಾರಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *