ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನ: ಜಿಲ್ಲಾ ಮಾದಿಗ ದಂಡೋರ ಸಮಿತಿ
1 min read

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನ:
ಜಿಲ್ಲಾ ಮಾದಿಗ ದಂಡೋರ ಸಮಿತಿ
ಚಿತ್ರದುರ್ಗ ಹೊಯ್ಸಳ ಸುದ್ದಿ:
ದಾವಣಗೆರೆ:
ಜಿಲ್ಲಾ ಮಾದಿಗ ದಂಡೋರ ಮತ್ತು ಮಾದಿಗ ಮೀಸಲಾತಿ ಹೋರಾಟ ಸಮಿತಿ ಸಂಘಟನೆಯಿಂದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನಿಸಲಾಗಿದೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2022- 23ನೇ ಸಾಲಿನಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ75 ಕ್ಕಿಂತ ಹೆಚ್ಚು ಅಂಕ ಪಡೆದ ಮಾದಿಗ ಸಮಾಜದ ವಿದ್ಯಾರ್ಥಿಗಳು ಜುಲೈ 31ರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿಯೊಂದಿಗೆ,
1)ಜಾತಿ ಪ್ರಮಾಣ ಪತ್ರ,
2)ಅಂಕಪಟ್ಟಿ,
3)ಒಂದು ಪಾಸ್ ಪೋರ್ಟ್, ಅಳತೆಯ ಫೋಟೋ,
4)ಅರ್ಜಿಯಲ್ಲಿ ಕಡ್ಡಾಯವಾಗಿ ದೂರವಾಣಿ ಸಂಖ್ಯೆಯನ್ನು ನಮೂದಿಸಬೇಕು.
ಅರ್ಜಿಯನ್ನು ಅಶೋಕ ರಸ್ತೆಯ ಆನಂದ ಶಾಪಿಂಗ್ – ಕಾಂಪ್ಲೆಕ್ಸ್ ನಲ್ಲಿರುವ ಸಂಘಟನೆಯ ಕಚೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗೆ ಈ ನಂಬರ್ ಗಳಿಗೆ 9886283447, 9740574544 ಸಂಪರ್ಕಿಸಿ ಅನುಕೂಲ ಪಡೆದುಕೊಳ್ಳಬೇಕೆಂದು ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಗುಡ್ಡಪ್ಪ ,
ಜಿಲ್ಲಾ ಉಪಾಧ್ಯಕ್ಷರಾದ ಚಿದಾನಂದಪ್ಪಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.