April 20, 2024

Chitradurga hoysala

Kannada news portal

ಆಗಸ್ಟ್.16 ರೊಳಗೆ ಬೆಳೆ ವಿಮೆಗೆ ನೋಂದಣಿ ಮಾಡಿ: ಈಶ ಮಾಹಿತಿ

1 min read

ಆಗಸ್ಟ್.16 ರೊಳಗೆ ಬೆಳೆ ವಿಮೆಗೆ ನೋಂದಣಿ ಮಾಡಿ: ಈಶ ಮಾಹಿತಿ

ವರದಿ : ಕಾವೇರಿ ಮಂಜಮ್ಮ ನವರ್

 

ಚಿತ್ರದುರ್ಗ ಹೊಯ್ಸಳ ಸುದ್ದಿ:

ಹೊಸದುರ್ಗ: ತಾಲೂಕಿನಲ್ಲಿ 2023- 24 ನೇ ಸಾಲಿನ ಮುಂಗಾರು ಹಂಗಾಮಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಜಾರಿಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ. ರೈತ ಬಾಂಧವರು ಮುಂಬರುವ ಆಗಸ್ಟ್ ತಿಂಗಳ 16 ರೊಳಗೆ ಬೆಳೆ ವಿಮೆಗೆ ನೋಂದಣಿ ಮಾಡಿಕೊಳ್ಳಿ ಎಂದು ಸಹಾಯಕ ಕೃಷಿ ನಿರ್ದೇಶಕ ಈಶಾ ಮಾಹಿತಿ ನೀಡಿದರು.

ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಬುಧವಾರ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಕುರಿತಂತೆ ಮಾತನಾಡಿದ ಅವರು, ಬೆಳೆ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ಆಸಕ್ತ ರೈತರು ಬೆಳೆ ವಿಮೆಗೆ ನೋಂದಣಿ ಮಾಡಲು ಹತ್ತಿ, ಶೇಂಗಾ, ಹುರುಳಿ, ಮೆಕ್ಕೆಜೋಳ, ಈರುಳ್ಳಿ, ತೊಗರಿ, ಕೆಂಪು ಮೆಣಸಿನಕಾಯಿ, ಸಾವೆ, ಎಳ್ಳು, ಜೋಳ, ಸೂರ್ಯಕಾಂತಿ, ಟೊಮೋಟೊ, ಬೆಳೆಗಳಿಗೆ ಇದೇ ಜು.31 ರಂದು ಹಾಗೂ ನವಣೆ, ಭತ್ತ ಮತ್ತು ರಾಗಿ ಬೆಳೆಗಳಿಗೆ ಮುಂಬರುವ ಆಗಸ್ಟ್ 16 ರಂದು ಕೊನೆಯ ದಿನಾಂಕವಾಗಿರುತ್ತದೆ ಹೇಳಿದರು.

ಆಸಕ್ತ ರೈತರು ನಿಗದಿತ ದಿನಾಂಕದೊಳಗೆ ಬೆಳೆ ವಿಮೆಗೆ ನೋಂದಣಿ ಮಾಡಬೇಕೆಂದು ವಿನಂತಿಸಿಕೊಳ್ಳುತ್ತೇನೆ. ಅಂತಿಮ ಸಮಯದಲ್ಲಿ ಜನದಟ್ಟಣೆಯಿಂದಾಗಿ ನೋಂದಣಿಯಲ್ಲಿ ತಪ್ಪುಗಳು ಸಂಭವಿಸಿ, ವಿಮೆ ಪರಿಹಾರ ಬಾರದಿರುವ ಸಂಭವವಿರುತ್ತದೆ. ಇದಕ್ಕೆ ಅವಕಾಶ ಕೊಡದೆ ಸಕಾಲದಲ್ಲಿ ನೋಂದಣಿ ಮಾಡಿ ಎಂದು ಹೇಳಿದ್ದಾರೆ.

About The Author

Leave a Reply

Your email address will not be published. Required fields are marked *