ಸಚಿವರುಗಳಿಗೆ ಸನ್ಮಾನ: ಆದಿ ಜಾಂಬವ ಮಹಾಸಂಸ್ಥಾನ ಮಠದ ಶ್ರೀ ಷಡಕ್ಷರಿ ಮುನಿ ಸ್ವಾಮೀಜಿ ಉಪಸ್ಥಿತಿ
1 min read


ಸಚಿವರುಗಳಿಗೆ ಸನ್ಮಾನ ಆದಿ ಜಾಂಬವ ಮಹಾಸಂಸ್ಥಾನ ಮಠದ ಶ್ರೀ ಷಡಕ್ಷರಿ ಮುನಿ ಸ್ವಾಮೀಜಿ ಉಪಸ್ಥಿತಿ
ವರದಿ: ವಿಜಯಕುಮಾರ್, ತೊಡರನಾಳ್
ಚಿತ್ರದುರ್ಗ ಹೊಯ್ಸಳ ನ್ಯೂಸ್/
ಹಿರಿಯೂರು:
ಹಿರಿಯೂರು ನಗರದ ತುಳಸಿ ಕಲ್ಯಾಣ ಮಂಟಪದಲ್ಲಿ ತಾಲೂಕು ಮಾದಿಗ ಸಮಾಜದ ವತಿಯಿಂದ ಶನಿವಾರ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದಲ್ಲಿ ಸಚಿವರಾದ ಕೆ ಹೆಚ್ ಮುನಿಯಪ್ಪ, ಡಿ ಸುಧಾಕರ್, ಆರ್ ಬಿ ತಿಮ್ಮಾಪುರ್ ಅವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಆದಿ ಜಾಂಬವ ಮಹಾಸಂಸ್ಥಾನ ಮಠದ ಶ್ರೀ ಷಡಕ್ಷರಿ ಮುನಿ ಸ್ವಾಮೀಜಿ, ಮಾಜಿ ಸಚಿವರಾದ ಹೆಚ್.ಆಂಜನೇಯ, ರಾಜ್ಯ ಕೆ.ಪಿ.ಸಿ.ಸಿ ವಕ್ತಾರ ನಿಕೇತ್ ರಾಜ್ ಮೌರ್ಯ, ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷರಾದ ಬಿ.ಎನ್.ಚಂದ್ರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಕೆ ತಾಜ್ ಪೀರ್, ಹಾಗೂ ಇನ್ನೂ ಹಲವು ಗಣ್ಯರು ಉಪಸ್ಥಿತರಿದ್ದರು.