May 19, 2024

Chitradurga hoysala

Kannada news portal

ಪ್ರತಿ ಹಳ್ಳಿಗೂ ಬಸ್ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳ ಶಿಕ್ಷಣ ಮಟ್ಟ ಹೆಚ್ಚಳಕ್ಕೆ ಆದ್ಯತೆ

1 min read

ಪ್ರತಿ ಹಳ್ಳಿಗೂ ಬಸ್ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳ ಶಿಕ್ಷಣ ಮಟ್ಟ ಹೆಚ್ಚಳಕ್ಕೆ ಆದ್ಯತೆ

ವರದಿ:ಕಾವೇರಿಮಂಜುಳಮ್ಮನವರ್,

ಚಿತ್ರದುರ್ಗಹೊಯ್ಸಳ ನ್ಯೂಸ್/

ಹೂಸದುರ್ಗ:31-07-2023

ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಶಿಕ್ಷಣ ವ್ಯವಸ್ಥೆ ನೀಡಬೇಕು.ವಿದ್ಯಾರ್ಥಿಗಳ ಶಿಕ್ಷಣ ವ್ಯವಸ್ಥೆ ಉತ್ತಮ ಪಡಿಸಲು ಪ್ರತಿ ಹಳ್ಳಿಗೂ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮಾಡಲಾಗುವುದು.
ಮುಂದಿನ ದಿನಗಳಲ್ಲಿ ಶೀಘ್ರವಾಗಿ ಈ ಸೌಲಭ್ಯವನ್ನ
ಕಲ್ಪಿಸಲಾಗುವುದು ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.

ಪಟ್ಟಣದ ಶಿವಗಂಗಾ ಸಮುದಾಯದ ಭವನದಲ್ಲಿ ಆಯೋಜಿಸಲಾಗಿದ್ದ ಪ್ರಸಕ್ತ ಸಾಲಿನ ಶೈಕ್ಷಣಿಕ ಸಮ್ಮೇಳನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಿವೃತ್ತ ನೌಕರರಿಗೆ ಸನ್ಮಾನ ಹಾಗೂ ಶೇಕಡಾ 100 ರಷ್ಟು ಫಲಿತಾಂಶ ಪಡೆದ ಪ್ರೌಢ ಶಾಲಾ ಮುಖ್ಯ ಶಿಕ್ಷಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಒಂದೊಂದು ಸರ್ಕಾರ ತನ್ನ ಅವಧಿಯಲ್ಲಿ ಒಂದೊಂದು ಶಿಕ್ಷಣ ನೀತಿ ಜಾರಿಗೆ ತಂದರೆ ಮಕ್ಕಳಿಗೆ ಹೊರೆಯಾಗುತ್ತದೆ.ಅದಕ್ಕಾಗಿ ಸರ್ಕಾರಗಳು ಶಿಕ್ಷಣ ನೀತಿ ಜಾರಿಗೆ ತರುವ ಮುನ್ನ ಶಿಕ್ಷಣ ತಜ್ಞರೊಂದಿಗೆ ಸಭೆ ಕರೆಯುತ್ತಾರೆ . ಆ ಸಮಯದಲ್ಲಿ ಶಿಕ್ಷಣ ತಜ್ಞರು ಶಿಕ್ಷಣ ನೀತಿ ಜಾರಿಯಾಗುವ ಪರಿಣಾಮ ಕುರಿತು ನಿಷ್ಪಕ್ಷಪಾತವಾಗಿ ಮಾತನಾಡಬೇಕು.ತಪ್ಪಿದ್ದಲ್ಲಿ ಶಿಕ್ಷಣ ವ್ಯವಸ್ಥೆ ಗೊಂದಲಕ್ಕೀಡಾಗಿ ಹಾಳಾಗುವುದು ಬೇಡ ಎಂಬ ವಿಷದವನ್ನ ವ್ಯಕ್ತಪಡಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಜೀವಿ ಹರಿಪ್ರಸಾದ್ ಉಪನ್ಯಾಸ ನೀಡಿದರು.ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಆರ್ ಲಕ್ಷ್ಮಯ್ಯ. ಕ್ಷೇತ್ರ ಶಿಕ್ಷಣಾಧಿಕಾರಿ ಸಯ್ಯದ್ ಮೊಸಿನ್,ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಂದ್ರಪ್ಪ. ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಟಿ. ಶೇಖರಪ್ಪ.ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಸಫಾರಿ ಎಂ ಶಿವಲಿಂಗಪ್ಪ. ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್ ಎನ್.ಒ. ಕಾರ್ಯದರ್ಶಿ ಬಿ ಹರೀಶ್.ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಪರಮೇಶ್ವರಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.ಈ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಬಾಗೂರು ಹನುಮಂತಪ್ಪ ಮಡಿವಾಳರ್ ಅವರು ನಿವೃತ್ತ ಶಿಕ್ಷಕರ ಪರವಾಗಿ ಶಾಸಕರಿಗೆ ಮಾಲಾರ್ಪಣೆ ಮಾಡಿ ಅಭಿನಂದಿಸಿದರು.

About The Author

Leave a Reply

Your email address will not be published. Required fields are marked *