ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರು ಬಸವೇಶ್ವರ ಆಸ್ಪತ್ರೆಯಲ್ಲಿ ಇರುವಂತಹ ಅಸ್ವಸ್ಥರನ್ನು ಭೇಟಿ ಮಾಡಿ ಅವರಿಗೆ ಆತ್ಮಸ್ಥೈರ್ಯವನ್ನು ತುಂಬಿದರು.
1 min read
ಶನಿವಾರ ಆರೋಗ್ಯ ಸಚಿವರು ಕವಾಡಿಗರ ಹಟ್ಟಿ ಗ್ರಾಮಕ್ಕೆ ಭೇಟಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ
ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರು ಬಸವೇಶ್ವರ ಆಸ್ಪತ್ರೆಯಲ್ಲಿ ಇರುವಂತಹ ಅಸ್ವಸ್ಥರನ್ನು ಭೇಟಿ ಮಾಡಿ ಅವರಿಗೆ ಆತ್ಮಸ್ಥೈರ್ಯವನ್ನು ತುಂಬಿದರು.
ಚಿತ್ರದುರ್ಗ ಹೊಯ್ಸಳ ನ್ಯೂಸ್/
ಚಿತ್ರದುರ್ಗ ಸುದ್ದಿ:
ತಾಲೂಕಿನ ಕವಾಡಿಗರಹಟ್ಟಿಯಲ್ಲಿ ಕಲಿಷುತ ನೀರು ಕುಡಿದು ನೂರಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು ಅದರಲ್ಲಿ ಈಗಾಗಲೇ ಐದು ಜನ ಮೃತಪಟ್ಟಿದ್ದು ಗ್ರಾಮದಲ್ಲಿ ಸೂತಕದ ಛಾಯೆ ಹರಡಿದೆ.ಕವಾಡಿಗರಹಟ್ಟಿಯಲ್ಲಿ ಪರಿಶಿಷ್ಟ ಜಾತಿ ಸಮುದಾಯದವರು ಕಲಿಷುದ ನೀರನ್ನು ಕುಡಿದು ಸಾವು ಬದುಕಿನ ನಡುವೆ ಹೋರಾಟವನ್ನು ನಡೆಸುತ್ತಿದ್ದಾರೆ ಇವರನ್ನು ನೋಡಲು ಸಮುದಾಯದ ರಾಜಕೀಯ ಮುಖಂಡರಾದ ಕೇಂದ್ರ ಸಚಿವ ಹಾಗೂ ಚಿತ್ರದುರ್ಗ ಸಂಸದರಾದ ಎ.ನಾರಾಯಣಸ್ವಾಮಿ ,ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ ಮಾಜಿ ಸಚಿವ ಹೆಚ್. ಆಂಜನೇಯ ಅವರು ಮತ್ತು ಸಮುದಾಯದ ಮುಖಂಡರು ಅಸ್ವಸ್ಥರನ್ನು ನೋಡಲು ಆಸ್ಪತ್ರೆ ಬಂದಿದ್ದಾರೆ.
ಗ್ರಾಮಕ್ಕೆ ಭೇಟಿ ನೀಡಿ ಮುಖಂಡರುಗಳು ಅಸ್ವಸ್ಥರ ಮನೆಯವರ ಕುಟುಂಬದವರಿಗೆ ಸಾಂತ್ವನವನ್ನು ಹೇಳಿದ್ದಾರೆ.
ಅಷ್ಟೇ ಅಲ್ಲದೆ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರು ಬಸವೇಶ್ವರ ಆಸ್ಪತ್ರೆಯಲ್ಲಿ ಇರುವಂತಹ ಅಸ್ವಸ್ಥರನ್ನು ಭೇಟಿ ಮಾಡಿ ಅವರಿಗೆ ಆತ್ಮಸ್ಥೈರ್ಯವನ್ನು ತುಂಬಿದರು.
ಈ ಒಂದು ಸಂದರ್ಭದಲ್ಲಿ ಪತ್ರಿಕಾ ಮಾಧ್ಯಮದವರೊಂದಿಗೆ ಮಾತನಾಡಿದ ಬಿಎನ್ ಚಂದ್ರಪ್ಪ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಈಗಾಗಲೇ ಗ್ರಾಮಕ್ಕೆ ಭೇಟಿ ನೀಡಿ ಇಲ್ಲಿನ ಸಮಸ್ಯೆಯನ್ನು ಅರಿತು ಮುಖ್ಯಮಂತ್ರಿಗಳಿಗೆ ಹಾಗೂ ಆರೋಗ್ಯ ಸಚಿವರಿಗೆ ಮಾಹಿತಿಯನ್ನು ನೀಡಲಾಗಿದೆ ಹಾಗಾಗಿ ಶನಿವಾರ ಬೆಳಗ್ಗೆ 10 ಗಂಟೆಗೆ ಆರೋಗ್ಯ ಸಚಿವರೇ ಕವಾಡಿಗರ ಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ಪಡೆಯಲಿದ್ದಾರೆ ಎಂದು ತಿಳಿಸಿದರು.