May 20, 2024

Chitradurga hoysala

Kannada news portal

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡಾ ಚಟುವಟಿಕೆಗಳಲ್ಲಿ ಆಸಕ್ತಿ ಹೆಚ್ಚು ಅಂತಹ ಮಕ್ಕಳಿಗೆ ಮಡಿಲು ಸಂಸ್ಥೆ ಸ್ಪೋರ್ಟ್ಸ್ ಕಿಟ್ ವಿತರಣೆ

1 min read

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡಾ ಚಟುವಟಿಕೆಗಳಲ್ಲಿ ಆಸಕ್ತಿ ಹೆಚ್ಚು ಅಂತಹ ಮಕ್ಕಳಿಗೆ ಮಡಿಲು ಸಂಸ್ಥೆ ಸ್ಪೋರ್ಟ್ಸ್ ಕಿಟ್ ವಿತರಣೆ

ಆರೋಗ್ಯ ಸದೃಢವಾಗಬೇಕಾದರೆ ಕ್ರೀಡೆಯಲ್ಲಿ ಭಾಗವಹಿಸಬೇಕು: ಪಿಡಿಓ ಬಸವರಾಜ್

ವರದಿ: ಭರತ್ ಭಾರ್ಗವ.ಸಿ.ಕೆ

CHITRADURGAHOYSALS NEWS/
ಚಿತ್ರದುರ್ಗ ಸುದ್ದಿ: ಆ.05

ಮನುಷ್ಯನ ಆರೋಗ್ಯ ಸದೃಢವಾಗಬೇಕಾದರೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಪಾಠದ ಜೊತೆಗೆ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ತಮ್ಮ ಬುದ್ಧಿಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕೆಂದು ಆಲಘಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವರಾಜ್ ಅವರು ತಿಳಿಸಿದರು.

ತಾಲೂಕಿನ ಸಿರಿಗೆರೆ ಸಮೀಪದ ಆಲಘಟ್ಟ ಗ್ರಾಮದಲ್ಲಿ ಶನಿವಾರ ಮಡಿಲು ಗ್ರಾಮೀಣ ಮತ್ತು ನಗರ ಅಭಿವೃದ್ಧಿ ಸಂಸ್ಥೆ ವತಿಯಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋರ್ಟ್ಸ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ವಾಲಿಬಾಲ್, ತ್ರೋಬಾಲ್, ಶಟಲ್ ಕಾಕ್, ರಿಂಗ್, ಚೆಸ್ ಬೋರ್ಡ್, ಸ್ಲೀಪಿಂಗ್ ವೈರ್ ಗಳನ್ನು ವಿತರಿಸಿ ಮಾತನಾಡಿದರು. ಮನುಷ್ಯನಿಗೆ ಆರೋಗ್ಯ ಚೆನ್ನಾಗಿ ಇರಬೇಕಾದರೆ ಪ್ರತಿನಿತ್ಯ ಯೋಗಾಸನ ಮಾಡಬೇಕು ಹಾಗೂ ಇತರೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ ದೇಹವನ್ನು ಸಮತೋಲನದಲ್ಲಿಟ್ಟುಕೊಳ್ಳಬೇಕು ಆಗ ಮಾತ್ರ ಮನುಷ್ಯನ ಬುದ್ದಿಯು ವಿಕಾಸ ಹೊಂದಲು ಸಾಧ್ಯವಾಗುತ್ತದೆ ಎಂದರು.

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡಾ ಚಟುವಟಿಕೆಗಳಲ್ಲಿ ಆಸಕ್ತಿ ಹೆಚ್ಚಾಗಿರುತ್ತವೆ ಅಂತಹ ಮಕ್ಕಳಿಗೆ ಸ್ಪೋರ್ಟ್ಸ್ ಕಿಟ್ ವಿತರಣೆ ಮಾಡಲು ಮುಂದೆ ಬಂದಿರುವಂತಹ ಮಡಿಲು ಸಂಸ್ಥೆ ಈಗಾಗಲೇ ಜಿಲ್ಲೆಯಲ್ಲಿ ವಿಶೇಷ ಸ್ಥಾನಮಾನವನ್ನು ಗಳಿಸಿದೆ ಪರಿಸರ ಸಂರಕ್ಷಣೆ, ನಾಲೆಡ್ಜ್ ಕಾಂಪಿಟೇಶನ್, ಸ್ವಚ್ಛತೆ ಅರಿವು ಮೂಡಿಸುವುದು, ಮತದಾನ ಜಾಗೃತಿ ಮೂಡಿಸುವುದು ಹೀಗೆ ಅನೇಕ ಸಾಮಾಜಿಕ ಕಾರ್ಯಗಳಲ್ಲಿ ಸಂಸ್ಥೆ ತೊಡಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳ ಜೀವನ ಅತ್ಯಂತ ಶ್ರೇಷ್ಠವಾದ ಜೀವನ ಓದು ಎಷ್ಟು ಮುಖ್ಯವೋ ಜೀವನದಲ್ಲಿ ಯಶಸ್ಸು ಗಳಿಸುವುದು ಅಷ್ಟೇ ಮುಖ್ಯ ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಬೇಕಾದರೆ ಪ್ರಸಕ್ತ ಸ್ಪರ್ಧಾತ್ಮಕ ದಿನಗಳಲ್ಲಿ ಹೆಚ್ಚಿನದಾಗಿ ಓದಿನ ಕಡೆಗೆ ಗಮನ ಹರಿಸಬೇಕಾಗಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು.

ಪ್ರಾಥಮಿಕ ಶಾಲೆ ಆಲಘಟ್ಟ ಪ್ರಭಾರ ಮುಖ್ಯ ಶಿಕ್ಷಕರಾದ ತಿಪ್ಪೇಸ್ವಾಮಿ ಅವರು ಮಾತನಾಡಿ ಸರ್ಕಾರಿ ಶಾಲೆ ಮಕ್ಕಳು ಯಾವುದರಲ್ಲೂ ಸಹ ಕಡಿಮೆ ಇಲ್ಲ ಆದರೆ ಮಕ್ಕಳಿಗೆ ಕ್ರೀಡಾ ಸಲಕರಣೆಗಳ ಕೊರತೆ ಇದೆ ಆದ್ದರಿಂದ ಮಕ್ಕಳಿಗೆ ಕ್ರೀಡೆಯಲ್ಲಿ ತೊಡಗಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ, ಸಂಸ್ಥೆಗಳು ಸ್ವಯಂ ಪ್ರೇರಿತರಾಗಿ ಸರ್ಕಾರಿ ಶಾಲೆಗಳನ್ನು ಉಳಿಸುವ ಅಭಿಯಾನವನ್ನು ಹಾಕಿಕೊಂಡು ವಿದ್ಯಾರ್ಥಿಗಳಿಗೆ ಸ್ಪೋರ್ಟ್ಸ್ ಕಿಟ್ ವಿತರಣೆ ಮಾಡುತ್ತಿರುವುದು ಸಂತೋಷದ ವಿಚಾರವಾಗಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ ಪಾಠ ಎಷ್ಟು ಮುಖ್ಯವೋ ಆಟವೂ ಕೂಡ ಅಷ್ಟೇ ಮುಖ್ಯವಾಗಿರುತ್ತದೆ ಅದೆಷ್ಟೋ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ರಾಜ್ಯ,ಅಂತರಾಜ್ಯ ಮಟ್ಟಗಳಲ್ಲಿ ಭಾಗವಹಿಸಿ, ಶಾಲೆಗೆ ಹಾಗೂ ಗ್ರಾಮಗಳಿಗೆ ಗೌರವವನ್ನು ತಂದಿರುವಂತಹ ಉದಾಹರಣೆಗಳು ಅದೆಷ್ಟೋ ಇವೆ,ಅತ್ಯಂತ ಕಿರಿಯ ವಯಸ್ಸಿನಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ದೇಶದ ಉನ್ನತ ಹುದ್ದೆಗಳನ್ನು ಅಲಂಕರಿಸುವುದರ ಜೊತೆಗೆ ದೇಶಕ್ಕೆ ಕೀರ್ತಿಯನ್ನು ತಂದುಕೊಟ್ಟಿದ್ದಾರೆ ಹಾಗಾಗಿ ನಿಮ್ಮಗೆ ಆಸಕ್ತಿ ಇರುವಂತಹ ಕ್ಷೇತ್ರದಲ್ಲಿ ನೀವು ಗುರುತಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ಮಡಿಲು ಸಂಸ್ಥೆಯ ಅಧ್ಯಕ್ಷರಾದ ಕುಮಾರಸ್ವಾಮಿ ಅವರು ಮಾತನಾಡಿ ವಿದ್ಯಾರ್ಥಿಗಳ ಜೀವನದಲ್ಲಿ ಪಾಠಕ್ಕಿಂತ ಆಟಗಳಲ್ಲಿ ಹೆಚ್ಚಿನ ಆಸಕ್ತಿದಾಯಕವಾಗಿರುತ್ತಾರೆ ಆದ್ದರಿಂದ ವಿದ್ಯಾರ್ಥಿಗಳಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ಆಸಕ್ತದಾಯಕ ವಿದ್ಯಾರ್ಥಿಗಳನ್ನು ಗಮನಿಸಿ ಅವರಿಗೆ ತರಬೇತಿಯನ್ನು ನೀಡಿ ಕ್ರೀಡಾಸ್ಪರ್ಧೆಗಳಲ್ಲಿ ಭಾಗವಹಿಸಲು ಸಹಕಾರ ನೀಡಿದ್ದೆ ಆದರೆ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಮುಂದೆ ಬರುತ್ತಾರೆ ಎಂದು ತಿಳಿಸಿದರು.

ಈ ಒಂದು ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಶೇಖರಪ್ಪ,ಕುಸುಮ, ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಾದ ಜಿ ಟಿ ಪ್ರಭು, ಮಡಿಲ ಸಂಸ್ಥೆ ಕಾರ್ಯದರ್ಶಿ ಆನಂದ್, ನಿರ್ದೇಶಕ ಮಹಾಂತೇಶ್, ಸುಮನ್ ಅಭಿಷೇಕ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

About The Author

Leave a Reply

Your email address will not be published. Required fields are marked *