May 3, 2024

Chitradurga hoysala

Kannada news portal

ಆಗಸ್ಟ.13 ರಿಂದ 15 ರವರೆಗೆ ಹರ್ ಘರ್ ತಿರಂಗಾ : ಎಲ್ಲರ ಮನೆ ಮನೆಗಳ ಮೇಲೆ ಹಾರಾಡಲಿ ಭಾರತದ ರಾಷ್ಟ್ರಧ್ವಜ- ದಿವ್ಯಪ್ರಭು ಜಿ.ಆರ್.ಜೆ.

1 min read


ಆಗಸ್ಟ.13 ರಿಂದ 15 ರವರೆಗೆ ಹರ್ ಘರ್ ತಿರಂಗಾ :

ಎಲ್ಲರ ಮನೆ ಮನೆಗಳ ಮೇಲೆ ಹಾರಾಡಲಿ ಭಾರತದ ರಾಷ್ಟ್ರಧ್ವಜ-ದಿವ್ಯಪ್ರಭು ಜಿ.ಆರ್.ಜೆ.

CHITRADURGAHOYSALA NEWS/

ಚಿತ್ರದುರ್ಗ ಆ. 12 (ಕರ್ನಾಟಕ ವಾರ್ತೆ) :

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ಸರ್ಕಾರದ ಸೂಚನೆಯಂತೆ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಆ.13 ರಿಂದ 15 ರವರೆಗೆ ಮೂರು ದಿನಗಳ ಕಾಲ ಜಿಲ್ಲೆಯ ಪ್ರತಿಯೊಬ್ಬರ ಮನೆ ಮನೆಗಳ ಮೇಲೆ ಭಾರತದ ರಾಷ್ಟ್ರಧ್ವಜ ಹಾರಿಸುವ ಮೂಲಕ ಪ್ರತಿಯೊಬ್ಬರಲ್ಲೂ ದೇಶಪ್ರೇಮ ಮೂಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಮನವಿ ಮಾಡಿದ್ದಾರೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯಾದ್ಯಂತ ಇದೇ ಆ. 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಭಿಯಾನವನ್ನು ಆಯೋಜಿಸಲಾಗಿದೆ. ಈ ಅವಧಿಯಲ್ಲಿ ಎಲ್ಲ ಸರ್ಕಾರಿ ಕಚೇರಿಗಳು, ಸಾರ್ವಜನಿಕ ಉದ್ಯಮಗಳು, ಸಾರ್ವಜನಿಕ ಸ್ಥಳಗಳು, ಸಂಘ ಸಂಸ್ಥೆಗಳಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡುವುದು ಸೇರಿದಂತೆ ಸಾರ್ವಜನಿಕರೂ ಸಹ ಸ್ವಯಂ ಪ್ರೇರಿತವಾಗಿ ಭಾಗವಹಿಸಿ, ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಆಗಸ್ಟ್ 13 ರಿಂದ 15 ರವರೆಗೆ ಮೂರು ದಿನ ಎಲ್ಲರ ಮನೆ ಮನೆಗಳ ಮೇಲೆ, ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು, ಸಾರ್ವಜನಿಕ ಸ್ಥಳಗಳಲ್ಲಿ ಧ್ವಜ ಶಿಷ್ಟಾಚಾರವನ್ನು ಚಾಚು ತಪ್ಪದೆ ಪಾಲನೆ ಮಾಡಿ, ಬೆಳಿಗ್ಗೆ 06 ರಿಂದ ಸಂಜೆ 06 ಗಂಟೆಯವರೆಗೆ ರಾಷ್ಟ್ರಧ್ವಜ ಹಾರಿಸಬೇಕು ಎಂದು ತಿಳಿಸಿದ್ದಾರೆ.

ಎಲ್ಲರಿಗೂ ಸುಲಭವಾಗಿ ರಾಷ್ಟ್ರಧ್ವಜ ಲಭ್ಯವಾಗುವಂತೆ ಮಾಡಲು ಅಗತ್ಯ ಪ್ರಮಾಣದ ರಾಷ್ಟ್ರ ಧ್ವಜಗಳನ್ನು ನಗರದ ತ.ರಾ.ಸು. ರಂಗಮಂದಿರ ಆವರಣದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯಲ್ಲಿ ದಾಸ್ತಾನು ಮಾಡಿ, ಇದೇ ಕಚೇರಿಯಲ್ಲಿ ವಿತರಿಸಲಾಗುತ್ತಿದ್ದು, ಚಿತ್ರದುರ್ಗ ಜಿಲ್ಲೆಗೆ 25000 ರಾಷ್ಟ್ರಧ್ವಜ ಹಂಚಿಕೆ ಮಾಡಲಾಗಿದೆ. ಎಲ್ಲ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತಿಗಳ ಮೂಲಕವೂ ಸಾರ್ವಜನಿಕರಿಗೆ ರಾಷ್ಟ್ರಧ್ವಜ ಲಭ್ಯವಾಗುವಂತೆ ಮಾಡಲಾಗಿದೆ. ಶಾಲಾ ಕಾಲೇಜುಗಳಿಗೂ ಹಂಚಿಕೆ ಮಾಡಲಾಗಿದೆ. ಪ್ರತಿ ರಾಷ್ಟ್ರಧ್ವಜಕ್ಕೆ ರೂ. 25. 50 ದರ ನಿಗದಿಪಡಿಸಲಾಗಿದೆ. ಹರ್ ಘರ್ ತಿರಂಗಾ ಅಭಿಯಾನವು ಪ್ರತಿಯೊಬ್ಬರಲ್ಲೂ ದೇಶಪ್ರೇಮ ಮೂಡುವಲ್ಲಿ, ಅತ್ಯಂತ ಪರಿಣಾಮಕಾರಿಯಾಗಲಿದ್ದು, ಪ್ರತಿಯೊಬ್ಬರೂ ಇದರಲ್ಲಿ ಭಾಗವಹಿಸಬೇಕು. ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಅಭಿಯಾನದಲ್ಲಿ ಪಾಲ್ಗೊಂಡು ತಮ್ಮ ತಮ್ಮ ಮನೆಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಬೇಕು. ಜಿಲ್ಲೆಯಲ್ಲಿ ಈ ಅಭಿಯಾನವನ್ನು ಅಭೂತಪೂರ್ವವಾಗಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಮನವಿ ಮಾಡಿದ್ದಾರೆ.

About The Author

Leave a Reply

Your email address will not be published. Required fields are marked *