ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ ಆಚರಣೆ
1 min read
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ ಆಚರಣೆ
ಸಂಪಾದಕ,ಸಿ.ಎನ್.ಕುಮಾರ್,
ಚಿತ್ರದುರ್ಗ:
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ ಆಚರಣೆಯನ್ನು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಚರಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಜೃತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ ಆಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.