ಆಂಬುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ
1 min read



ಆಂಬುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ
CHITRADURGAHOYSALA NEWS/
ವರದಿ:ಆನಂದ ಆಲಘಟ್ಟ
ಚಿತ್ರದುರ್ಗ ಸುದ್ದಿ:
ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯ ಸಮೀಪದಲ್ಲಿರುವ ಮನಮೈನಹಟ್ಟಿ ಗ್ರಾಮದ ಮಹಿಳೆ ಸುಚಿತ್ರ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಮನಮೈನಹಟ್ಟಿ ಗ್ರಾಮದಿಂದ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಹೆರಿಗೆ ಎಂದು ಕರೆದುಕೊಂಡು ಬರುವಂತಹ ಸಂದರ್ಭದಲ್ಲಿ ಬೆಳಗಟ್ಟ ಗ್ರಾಮದ ಸಮೀಪದದಲ್ಲಿ ಆಂಬುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮವನ್ನು ನೀಡುತ್ತಾಳೆ.
ತಾಯಿ ಮತ್ತು ಮಗುವಿಗೆ ಯಾವುದೇ ರೀತಿ ತೊಂದರೆ ಆಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ.
ಈ ಸಂದರ್ಭದಲ್ಲಿ ಆರೋಗ್ಯಧಿಕಾರಿ ಪ್ರಹ್ಲಾದ್, ಚಿದಾನಂದ ಹಾಗೂ ಆಶಾ ಕಾರ್ಯಕರ್ತರು ಇದ್ದರು.