ಡಾ.ಬಸವರಾಜ ಜಿಗಳೂರ ಅಗಲಿಕೆಗೆ ಶ್ರೀ ರಂಭಾಪುರಿ ಜಗದ್ಗುರುಗಳು ಸಂತಾಪ: ಸಿ.ಎಚ್. ಬಾಳನಗೌಡ್ರ
1 min read



ಡಾ.ಬಸವರಾಜ ಜಿಗಳೂರ ಅಗಲಿಕೆಗೆ ಶ್ರೀ ರಂಭಾಪುರಿ ಜಗದ್ಗುರುಗಳ ಸಂತಾಪ
ಚಿತ್ರದುರ್ಗಹೊಯ್ಸಳ ನ್ಯೂಸ್/
ಬಾಳೆಹೊನ್ನೂರು:
ಬೆಂಗಳೂರಿನ ಅನುಭವ ಪ್ರಿಂಟರ ಮೂಲಕ ಅದ್ಭುತ ಸಾಧನೆ ಮಾಡಿದ್ದ ಸರಳ ಸ್ನೇಹಜೀವಿ ಡಾ. ಬಸವರಾಜ ಜಿಗಳೂರ(79) ಇವರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಶ್ರೀ ಜಗದ್ಗುರು ರಂಭಾಪುರಿ ಮಹಾಪೀಠದ ಬಹುತೇಕ ಮುದ್ರಣ ಕಾರ್ಯಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಿಕೊಂಡು ಬರುತ್ತಿದ್ದ ಅವರು ಶ್ರೀ ಜಗದ್ಗುರುಗಳೊಡನೆ ಆತ್ಮೀಯ ಸಂಬಂಧ ಹೊಂದಿದ್ದರು. ನಾಡಿನ ಯಾವುದೇ ಭಾಗದ ಶ್ರೀ ಪೀಠದ ಮಹತ್ವದ ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಿದ್ದ ಅವರು ಕ್ರಿಯಾಶೀಲರಾಗಿದ್ದರು. ವಿಶೇಷವಾಗಿ ರಂಭಾಪುರಿ ಬೆಳಗು ಮುದ್ರಣದ ಜವಾಬ್ದಾರಿಯನ್ನು ನಿರ್ವಹಿಸಿಕೊಂಡು ಬರುತ್ತಿದ್ದರು. ಸಾಮಾಜಿಕ ಧಾರ್ಮಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದ ಬಸವರಾಜ ಜಿಗಳೂರ ಅವರ ಅಗಲಿಕೆ ತೀವ್ರ ನೋವನ್ನುಂಟು ಮಾಡಿದೆ. ಮೃತರ ಆತ್ಮಕ್ಕೆ ದಯಾಘನನಾದ ಪರಮಾತ್ಮನು ಚಿರಶಾಂತಿ ನೀಡಲಿ ಮತ್ತು ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಕುಟುಂಬ ವರ್ಗದವರಿಗೆ ನೀಡಲಿ ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ,ಎಂದು ಬಾಳೆಹೊನ್ನೂರು ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದ ವಾರ್ತಾ ಸಂಯೋಜನಾಧಿಕಾರಿ,
ಸಿ.ಎಚ್. ಬಾಳನಗೌಡ್ರ ಇವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.