April 20, 2024

Chitradurga hoysala

Kannada news portal

ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲ್ಲ!: ಎಚ್‌.ಆಂಜನೇಯ

1 min read

ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲ್ಲ!: ಎಚ್‌.ಆಂಜನೇಯ _________________________

 

ಚಿತ್ರದುರ್ಗ ಹೊಯ್ಸಳ ನ್ಯೂಸ್/

ವರದಿ: ವಿಜಯಕುಮಾರ್  ತೂಡರನಾಳ್

ದಾವಣಗೆರೆ:

ಮುಂಬರುವ ಲೋಕಸಭಾ ಚುನಾವಣೆಗೆ ಚಿತ್ರದುರ್ಗ ಮೀಸಲು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆಂದು ಹೇಳಲು ನಾನು ಯಾರು? ನಾನು ಸ್ಪರ್ಧೆ ಮಾಡುವುದಿಲ್ಲ. ಒಂದು ವೇಳೆ ನಮ್ಮ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಿದರೆ ನೋಡೋಣ! ಎಂದು ಸಮಾಜಕಲ್ಯಾಣ ಇಲಾಖೆಯ ಮಾಜಿ ಸಚಿವ ಎಚ್‌.ಆಂಜನೇಯ ಹೇಳಿದರು.

ನಗರದಲ್ಲಿ ಮಂಗಳವಾರ ಮಾದ್ಯಮ ಮಿತ್ರರೊಂದಿಗೆ ಮಾತನಾಡಿದರು, ಹೋರಾಟದಿಂದಲೇ ಬೆಳೆದು ಬಂದವನು ನಾನು ದಲಿತರು,
ಶೋಷಿತರು,ಬಡವರ ಪರವಾಗಿ ನನ್ನ ಹೋರಾಟವನ್ನು ಮುಂದುವರಿಸುತ್ತೇನೆ. ನಮ್ಮ ಸರ್ಕಾರವು ಸಾಮಾಜಿಕ ನ್ಯಾಯದ ಪರವಾದ ಸರ್ಕಾರ.ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಅಧಿಕಾರಕ್ಕೆ ಬಂದ ತಕ್ಷಣವೇ ಬೆಂಗಳೂರು ಕಮಿಷನರ್ ಹುದ್ದೆಯನ್ನು ಪರಿಶಿಷ್ಟ ಪಂಗಡದವರಿಗೆ ನೀಡಲಾಗಿದೆ ಎಂದರು.

ಬಿಜೆಪಿಯು ಜನರಿಗೆ ವಂಚಿಸಿ, ಅಧಿಕಾರಕ್ಕೆ ಬಂದರು ಮೋದಿಯವರು ಬೆಲೆ ಏರಿಕೆಗೆ ಕಡಿವಾಣ ಹಾಕುವಲ್ಲಿ, ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆಂದು ಎಂದು ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

About The Author

Leave a Reply

Your email address will not be published. Required fields are marked *