ಶಾಲೆಯ ಕೊಠಡಿಗಳಿಗೆ ಶಾಸಕ ಗೂಳಿಹಟ್ಟಿ ಶೇಖರ್ ಭೂಮಿ ಪೂಜೆ
1 min readಹೊಸದುರ್ಗ ತಾಲೂಕಿನ ಶ್ರೀರಾಂಪುರ ಹೋಬಳಿಯ ಓಬಳಾಪುರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಶಾಲಾ ಕೊಠಡಿಗಳಿಗೆ ಶಾಸಕ ಗೂಳಿಹಟ್ಟಿ ಶೇಖರ್ ಬುಧವಾರ ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡದೆ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಕೋಡಿಹಳ್ಳಿಗೆ 2 ಶಾಲೆ ಮತ್ತು ಸೂಜಿಕಲ್ ಹಾಗೂ ಓಬಳಾಪುರ ಗ್ರಾಮಗಳಿಗೆ ತಲಾ 1 ಸರ್ಕಾರಿ ಶಾಲೆಗಳನ್ನು ನಬಾರ್ಡ್ ಯೋಜನೆಯಡಿ ತಲಾ 11 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುವುದು ಎಂದು ಗೂಳಿಹಟ್ಟಿ ಶೇಖರ್ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪಿ.ಲಿಂಗರಾಜು, ವಾಲ್ಮೀಕಿ ರವಿಕುಮಾರ್ ಇದ್ದರು.