Breaking. ಡಿಜೆ ಹಳ್ಳಿ ಗಲಭೆಯಲ್ಲಿ ಅಮಾಯಕರ ಮೇಲೆ ಗೂಂಡ ವರ್ತನೆ ಮಾಡುವರನ್ನು ಬಂಧಿಸಿ: ವಿಶ್ವ ಹಿಂದೂ ಪರಿಷತ್
1 min readಚಿತ್ರದುರ್ಗ: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಚಿತ್ರದುರ್ಗದಲ್ಲಿ ವಿಶ್ವ ಹಿಂದು ಪರಿಷತ್, ಭಜರಂಗದಳದ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ ಉಪ ಜಿಲ್ಲಾಧಿಕಾರಿ ಸಂಗಪ್ಪ ಅವರಿಗೆ ಮನವಿ ಸಲ್ಲಿಸಿದರು.
ನಗರದ ಡಿಸಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಅಮಾಯಕ ಸಾರ್ವಜನಿಕರ ಮೇಲೆ ದಾಳಿ ನಡೆಸಿದ ಗೂಂಡಗಳನ್ನ ಈ ಕೂಡಲೇ ಬಂಧಿಸುವಂತೆ ಒತ್ತಾಯ ಮಾಡಿದ್ದು ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಗಲಾಟೆ ನಡೆಸಿದ ಗೂಂಡಗಳನ್ನ ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು. ಈ ಸಂಧರ್ಭದಲ್ಲಿ ಐವತ್ತಕ್ಕೂ ಹೆಚ್ಚು ಕಾರ್ಯಕರ್ತರಿಂದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.