ಬೆಳೆ ಸಮೀಕ್ಷೆ ಕಾರ್ಯದ ಆಟೋ ಪ್ರಚಾರಕ್ಕೆ ಗೂಳಿ ಹಟ್ಟಿ ಶೇಖರ್ ಚಾಲನೆ
1 min readಹೊಸದುರ್ಗ : 2020-21ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವು ಹೊಸದುರ್ಗ ತಾಲ್ಲೂಕಿನಾದ್ಯಂತ ಆರಂಭವಾಗುತ್ತಿದ್ದು ಈ ಬಗ್ಗೆ ಆಟೋ ಪ್ರಚಾರ ಕಾರ್ಯಕ್ರಮವನ್ನು ಶಾಸಕ ಗೂಳಿಹಟ್ಟಿ ಡಿ. ಶೇಖರ ಮತ್ತು ತಹಶೀಲ್ದಾರ್ ತಿಪ್ಪೇಸ್ವಾಮಿ ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಶಾಸಕ ಗೂಳಿಹಟ್ಟಿ ಶೇಖರ್ ಈ ಬಾರಿ ಕನಿಷ್ಠ ಬೆಂಬಲ ಬೆಳೆ ಯೋಜನೆಯಡಿ ಆಕ್ಷೇಪಣೆ ಸಲ್ಲಿಸಲು ಸಾಧ್ಯವಿಲ್ಲದ ಕಾರಣ ರೈತರು ತಮ್ಮ ಜಮೀನಿನಲ್ಲಿ ಬೆಳೆ ಬೆಳೆದ ವಿವರ ದಾಖಲಿಸಲು “ರೈತರ ಬೆಳೆ ಸಮೀಕ್ಷೆ” ಎಂಬ ಹೆಸರಿನ ಮೊಬೈಲ್ ಆ್ಯಪ್‍ನ್ನು ಗೂಗಲ್ ಪ್ಲೇ ಸ್ಟೋರ್‍ನಿಂದ ಡೌನ್‍ಲೋಡ್ ಮಾಡಿಕೊಂಡು ಬೆಳೆ ಸಮೀಕ್ಷೆಯನ್ನು ಖಡ್ಡಾಯವಾಗಿ ಸ್ವತ: ತಮ್ಮ ಜಮೀನಿನ ವಿವರವನ್ನು ದಾಖಲಿಸಬೇಕೆಂದು ತಿಳಿಸಿದರು.
ಸಹಾಯಕ ಕೃಷಿ ನಿರ್ದೇಶಕ ಸಿ.ಎಸ್.ಈಶ ಮಾತನಾಡಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ವಿವರಗಳನ್ನು ಆಗಸ್ಟ್ 11 ರಿಂದ ಆಗಸ್ಟ್ 24ರೊಳಗೆ ಅಫ್ಲೋಡ್ ಮಾಡಲು ಕಾಲಾವಧಿ ನಿಗದಿಪಡಿಸಲಾಗಿದ್ದು, ಬೆಳೆ ಸಮೀಕ್ಷೆ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣ ಲೆಕ್ಕ ಹಾಕುವ ಕಾರ್ಯದಲ್ಲಿ , ಕನಿಷ್ಠ ಬೆಂಬಲ ಬೆಳೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮೆಯ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು , ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು, ಬ್ಯಾಂಕ್ ಮತ್ತು ವ್ಯವಸಾಯ ಸೇವಾ ಸಹಕಾರಿ ಸಂಘಗಳ ಮುಖಾಂತರ ಬೆಳೆ ಸಾಲ ನೀಡುವ ಸಂದರ್ಭಗಳಲ್ಲಿ ಬಳಸುವುದರಿಂದ ಹೊಸದುರ್ಗ ತಾಲ್ಲೂಕಿನ ರೈತರು ಸದರಿ ಅವಕಾಶವನ್ನು ಪಡೆದುಕೊಂಡು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ತಾವೇ ಸರ್ಕಾರಕ್ಕೆ ನಿಗಧಿತ ಸಮಯದೊಳಗೆ ತಾವು ಬೆಳೆದ ಮಾಹಿತಿ ಅಫ್ಲೋಡ್ ಮಾಡಲು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಂತ್ರಿಕ ಕೃಷಿ ಅಧಿಕಾರಿ ವೆಂಕಟೇಶ್ ಮತ್ತು ಸಿಬ್ಬಂದಿವರ್ಗ ಹಾಗೂ ರೈತರು ಭಾಗವಹಿಸಿದ್ದರು.