ಸಂಪೂರ್ಣ ಮಾಹಿತಿ ಪಡೆದುಕೊಂಡು ಬೆಳೆ ಸಮೀಕ್ಷೆ ಆ್ಯಪ್ ಉಪಯೋಗ ಪಡೆದುಕೊಳ್ಳಿ: ಶಾಸಕ ಟಿ.ರಘುಮೂರ್ತಿ
1 min readಚಳ್ಳಕೆರೆ: ಎಲ್ಲಾ ರೈತರು ಸ್ವಯಂ ಬೆಳೆ ಸಮೀಕ್ಷೆ ನಡೆಸಿಕೊಂಡು ಉಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಚಳ್ಳಕೆರೆ ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ಬೆಳೆ ಸಮೀಕ್ಷೆ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.
ಚಳ್ಳಕೆರೆಯ ಎಲ್ಲಾ ಭಾಗದ ರೈತರು ತಮ್ಮ ಜಮೀನುಗಳಲ್ಲಿ ಸ್ವತಃ ಸಮೀಕ್ಷೆ ಮಾಡಿಕೊಳ್ಳಬೇಕು. ಈ ಆ್ಯಪ್ ನ ಉಪಯೋಗ ಎಲ್ಲಾ ರೈತರು ಪಡೆದುಕೊಳ್ಳಬೇಕು, ಪ್ರಚಾರ ಸಹ ಮಾಡುತ್ತಿದ್ದು ಗೊಂದಲಗಳು ಇಲ್ಲದಂತೆ ರೈತರಿಗೆ ಸಮಾಧಾನದಿಂದ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ ನಾಗಭೂಷಣ್, ತಹಶಿಲ್ದಾರ್ ಮಲ್ಲಿಕಾರ್ಜುನ್ , ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಮೋಹನ್ ಕುಮಾರ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಾದ ವಿರುಪಾಕ್ಷಪ್ಪ, ರೈತ ಮುಖಂಡರಾದ ಕೆ ಪಿ ಭೂತಯ್ಯ, ಮತ್ತು ತಾಲೂಕು ಪಂಚಾಯತ್ ಸದಸ್ಯರಾದ ಹೆಚ್ ಅಂಜನಪ್ಪ ಹಾಜರಿದ್ದರು