ಇಂಗಳದಾಳ್ ತಳವಾರ ಸಂಚಲಪ್ಪ ನಾಯಕರ ಶಾಲೆಗೆ 100% ಫಲಿತಾಂಶ:ಎಚ್.ಎಸ್.ಟಿ.ಸ್ವಾಮಿ
1 min readಚಿತ್ರದುರ್ಗ ತಾಲ್ಲೂಕಿನ ಇಂಗಳದಾಳ್ ಗ್ರಾಮದ ತಳವಾರ ಸಂಚಲಪ್ಪ ನಾಯಕರ ಪ್ರೌಢಶಾಲೆಗೆ 2019-2020 ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿದೆ. ಎಂದು ಶಾಲೆಯ ಮುಖ್ಯೋಪಾಧ್ಯಾಯ ಎಚ್.ಎಸ್.ಟಿ.ಸ್ವಾಮಿ ಹರ್ಷ ವ್ಯಕ್ತಪಡಿಸಿದ್ದಾರೆ. ಪರೀಕ್ಷೆಗೆ ಕುಳಿತಿದ್ದ ಒಟ್ಟು 26 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು, ಇಬ್ಬರು ಉನ್ನತ ಶ್ರೇಣಿ, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಓ.ಪಾಲಮ್ಮ, ಮುಖ್ಯಶಿಕ್ಷಕರು, ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.